ಪಾಕಿಸ್ಥಾನ-ಶ್ರೀಲಂಕಾ: 2ನೇ ಏಕದಿನ ಒಂದು ದಿನ ಮುಂದಕ್ಕೆ
Team Udayavani, Sep 29, 2019, 5:32 AM IST
ಕರಾಚಿ: ಪಾಕಿಸ್ಥಾನದಲ್ಲಿ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಆರಂಭಗೊಳ್ಳಲು ಮಳೆಗೂ ಇಷ್ಟವಿಲ್ಲವೇನೋ. ಶುಕ್ರವಾರ ಇಲ್ಲಿ ನಡೆಯಬೇಕಿದ್ದ ಪ್ರವಾಸಿ ಶ್ರೀಲಂಕಾ ಎದುರಿನ ಮೊದಲ ಏಕದಿನ ಪಂದ್ಯ ಒಂದೂ ಎಸೆತ ಕಾಣದೆ ಕೊಚ್ಚಿ ಹೋಗಿತ್ತು.
ಸರಣಿಯ 2ನೇ ಮುಖಾಮುಖೀ ರವಿವಾರ ಇಲ್ಲಿಯೇ ನಡೆಯಬೇಕಿತ್ತು. ಆದರೆ ಈ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಅಂಗಳವನ್ನು ಸಿದ್ಧಗೊಳಿಸಲು ಸಿಬಂದಿಗಳಿಗೆ ಹೆಚ್ಚಿನ ಕಾಲಾವಕಾಶ ನೀಡುವುದೇ ಇದರ ಉದ್ದೇಶ ಎಂದು ಪಿಸಿಬಿ ಹೇಳಿದೆ. ಈ ಕುರಿತು ಶ್ರೀಲಂಕಾ ಕ್ರಿಕೆಟ್ ಮಂಡಳಿಯೊಂದಿಗೆ ಮಾತುಕತೆ ನಡೆಸಿದ ಬಳಿಕ ಪಂದ್ಯವನ್ನು ಮುಂದೂಡಲು ನಿರ್ಧರಿಸಲಾಯಿತು.
ಶುಕ್ರವಾರ ಸುರಿದ ಭಾರೀ ಮಳೆಯಿಂದ ಕರಾಚಿಯ “ನ್ಯಾಶನಲ್ ಸ್ಟೇಡಿಯಂ’ ಕೆರೆಯಂತಾಗಿತ್ತು. “ಅಕಾಲಿಕ ಮಳೆಯಿಂದ ಬಹು ನಿರೀಕ್ಷಿತ ಸರಣಿಗೆ ಅಡ್ಡಿಯಾಗಿದೆ. ಹೀಗಾಗಿ ವೇಳಾಪಟ್ಟಿಯನ್ನು ಪರಿಷ್ಕರಿಸಲು ನಿರ್ಧರಿಸಲಾಯಿತು. ಇದಕ್ಕೆ ಒಪ್ಪಿದ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಕೃತಜ್ಞತೆಗಳು’ ಎಂಬುದಾಗಿ ಪಿಸಿಬಿ ನಿರ್ದೇಶಕ ಝಾಕಿರ್ ಖಾನ್ ಹೇಳಿದ್ದಾರೆ.
ಮೊದಲ ಪಂದ್ಯಕ್ಕೆ ಹಾಗೂ ರವಿವಾರದ ಪಂದ್ಯಕ್ಕೆಂದು ಖರೀದಿಸಿದ ಟಿಕೆಟ್ಗಳನ್ನು 2ನೇ ಅಥವಾ 3ನೇ ಪಂದ್ಯಕ್ಕೂ ಉಪಯೋಗಿಸಬಹುದು ಎಂದು ಪಿಸಿಬಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.