Pakistan ವನಿತಾ ಕ್ರಿಕೆಟ್; ಫಾತಿಮಾ ಸನಾ ನೂತನ ನಾಯಕಿ
Team Udayavani, Aug 26, 2024, 12:48 AM IST
ಕರಾಚಿ: ನಿದಾ ದರ್ ಅವರನ್ನು ಪಾಕಿಸ್ಥಾನ ವನಿತಾ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಇವರ ಬದಲು 22 ವರ್ಷದ ಫಾತಿಮಾ ಸನಾ ಆಯ್ಕೆಯಾಗಿದ್ದಾರೆ. ಮುಂಬರುವ ವನಿತಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಫಾತಿಮಾ ಪಾಕ್ ತಂಡವನ್ನು ಮುನ್ನಡೆಸಲಿದ್ದಾರೆ.
ನಿದಾ ದರ್ ಕಳೆದ ಇಂಗ್ಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗಳಲ್ಲಿ ನಾಯಕಿಯಾಗಿ ಘೋರ ವೈಫಲ್ಯ ಕಂಡಿದ್ದರು. ಟಿ20 ಏಷ್ಯಾ ಕಪ್ನಲ್ಲೂ ಪಾಕ್ ತಂಡ ಸೆಮಿಫೈನಲ್ ಹಂತದಲ್ಲಿ ಮುಗ್ಗರಿಸಿತ್ತು. ಈ ಕಾರಣಕ್ಕಾಗಿ ನಿದಾ ದರ್ ಅವರನ್ನು ನಾಯಕತ್ವದ ಜವಾಬ್ದಾರಿಯಿಂದ ಮುಕ್ತಗೊಳಿಸಲಾಯಿತು. ಆದರೆ ಅವರು ವಿಶ್ವಕಪ್ ತಂಡದಲ್ಲಿ ಮುಂದುವರಿಯಲಿದ್ದಾರೆ. ಬೌಲಿಂಗ್ ಆಲ್ರೌಂಡರ್ ಆಗಿರುವ ಫಾತಿಮಾ ಸನಾ 41 ಏಕದಿನ ಹಾಗೂ 40 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ. ಬದಲಿ ನಾಯಕಿಯಾಗಿಯೂ ಕರ್ತವ್ಯ ನಿಭಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.