ಬಿಸಿಸಿಐ ವಿರುದ್ಧ ಪಿಸಿಬಿ 391 ಕೋಟಿ ರೂ. ದಾವೆ
Team Udayavani, Apr 12, 2018, 6:00 AM IST
ಹೊಸದಿಲ್ಲಿ: ಬಿಸಿಸಿಐ ವಿರುದ್ಧ 391 ಕೋಟಿ ರೂ. ಪರಿಹಾರ ಕೋರಿ ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಹೂಡಿರುವ ದಾವೆ ಪರಿಹರಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಮೂವರು ಸದಸ್ಯರ ಸಮಿತಿ ರಚಿಸಿದೆ. 2015-2023ರ ಅವಧಿಯಲ್ಲಿ ಪಾಕಿಸ್ಥಾನ 5 ದ್ವಿಪಕ್ಷೀಯ ಸರಣಿಯಲ್ಲಿ ಪಾಲ್ಗೊಳ್ಳುವ ಕುರಿತು ತಿಳಿವಳಿಕೆ ಪತ್ರಕ್ಕೆ ಬಿಸಿಸಿಐ ಸಹಿ ಹಾಕಿತ್ತು. ಆದರೆ ಎರಡೂ ದೇಶಗಳ ನಡುವೆ ಉದ್ವಿಗ್ನ ಸ್ಥಿತಿಯಿರುವುದರಿಂದ ಕೇಂದ್ರ ಸರಕಾರ ಪಾಕ್ ಜತೆ ಕ್ರಿಕೆಟ್ ಆಡಲು ಅನುಮತಿ ನೀಡಿರಲಿಲ್ಲ. ಇದರಿಂದ ತನಗೆ ನಷ್ಟವಾಗಿದೆಯೆಂದು ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಆರೋಪಿಸಿದೆ.
ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಆರೋಪವನ್ನು ಬಿಸಿಸಿಐ ನಿರಾಕರಿಸಿದೆ. ಪಿಸಿಬಿ ಜತೆಗೆ ನಾವು ಮಾಡಿಕೊಂಡಿದ್ದು ತಿಳಿವಳಿಕೆ ಪತ್ರವೇ (ಎಒಯು) ಹೊರತು ಒಪ್ಪಂದವಲ್ಲ. ಜತೆಗೆ ಕೇಂದ್ರ ಸರಕಾರದ ತೀರ್ಮಾನದ ಕಾರಣ ನಮಗೆ ಆ ದೇಶದೊಂದಿಗೆ ಕ್ರಿಕೆಟ್ ಆಡಲು ಸಾಧ್ಯವಾಗಿಲ್ಲ. ಆದ್ದರಿಂದ ಇಲ್ಲಿ ನಮ್ಮ ತಪ್ಪೇನೂ ಇಲ್ಲ ಎಂದು ಬಿಸಿಸಿಐ ಹೇಳಿಕೊಂಡಿದೆ. ಈ ವಿವಾದವನ್ನು ಬಗೆಹರಿಸಲು ಐಸಿಸಿ ಮೂರು ಸದಸ್ಯರ ಸಮಿತಿ ರಚಿಸಿದೆ. ಈ ಸಮಿತಿ ನೀಡುವ ತೀರ್ಮಾನ ಅಂತಿಮ ಇದನ್ನು ಪ್ರಶ್ನಿಸುವಂತಿಲ್ಲವೆಂದು ಅದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.