Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Team Udayavani, Nov 23, 2024, 3:38 PM IST
ಪರ್ತ್: ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಸಂಪೂರ್ಣ ಹಿಡಿತ ಸಾಧಿಸಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 218 ರನ್ ಮುನ್ನಡೆಯಲ್ಲಿದೆ.
ಮೊದಲ ದಿನದಾಟದ ಅಂತ್ಯಕ್ಕೆ ಏಳು ವಿಕೆಟ್ ನಷ್ಟಕ್ಕೆ 67 ರನ್ ಗಳಿಸಿದ್ದ ಆಸ್ಟ್ರೇಲಿಯಾ ತಂಡವು ಶನಿವಾರ ಮೊದಲ ಸೆಶನ್ ನಲ್ಲಿ 104 ರನ್ ಗಳಿಗೆ ಆಲೌಟಾಯಿತು. ಬಳಿಕ ಬ್ಯಾಟಿಂಗ್ ಆರಂಭಿಸಿದ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 172 ರನ್ ಗಳಿಸಿದೆ.
ಭಾರತದ ಪರ ಆರಂಭಿಕರಾಗಿ ಇಳಿದ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಅವರು ಟೀಂ ಇಂಡಿಯಾಗೆ ಭದ್ರ ಬುನಾದಿ ಯಾಕಿದ್ದಾರೆ. ಎರಡು ಸೆಶನ್ ಗಳಲ್ಲಿ ಆಸೀಸ್ ಬೌಲರ್ ಗಳನ್ನು ಎದುರಿಸಿದ ಈ ಜೋಡಿ ಅಜೇಯ 172 ರನ್ ಕಲೆ ಹಾಕಿದೆ.
ಯಶಸ್ವಿ ಜೈಸ್ವಾಲ್ ಅವರು ಏಳು ಬೌಂಡರಿ ಮತ್ತು ಎರಡು ಸಿಕ್ಸರ್ ನೆರವಿನಿಂದ ಅಜೇಯ 90 ರನ್ ಗಳಿಸಿದ್ದು, ಕೆಎಲ್ ರಾಹುಲ್ ಅವರು ನಾಲ್ಕು ಬೌಂಡರಿ ನೆರವಿನಿಂದ 62 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಸದ್ಯ ಭಾರತ 218 ರನ್ ಮುನ್ನಡೆಯಲ್ಲಿದೆ.
2010 ರಲ್ಲಿ ಎಂಸಿಜಿ ನಲ್ಲಿ ಆಂಡ್ರ್ಯೂ ಸ್ಟ್ರಾಸ್ ಮತ್ತು ಅಲಸ್ಟೇರ್ ಕುಕ್ ಅವರು 159 ರನ್ ಗಳಿಸಿದ ಬಳಿಕ ಆಸ್ಟ್ರೇಲಿಯಾದಲ್ಲಿ ಪ್ರವಾಸಿ ತಂಡದ ಮೊದಲ 150+ ಆರಂಭಿಕ ಜೊತೆಯಾಟವನ್ನು ರಾಹುಲ್ ಜೈಸ್ವಾಲ್ ಆಡಿದರು.
ಮೊದಲ ದಿನದಾಟದಲ್ಲಿ ವೇಗಿಗಳಿಗೆ ನೆರವು ನೀಡಿದ್ದ ಪರ್ತ್ ಪಿಚ್ ಎರಡನೇ ದಿನದಾಟದಲ್ಲಿ ನಿಧಾನವಾಗಿ ಬ್ಯಾಟರ್ ಸ್ನೇಹಿಯಾಗಿ ಪರಿವರ್ತನೆಯಾಗಿದೆ. ಮೊದಲ ದಿನದಾಟದಲ್ಲಿ 217 ರನ್ ಗಳಿಗೆ 17 ವಿಕೆಟ್ ಗಳು ಉರುಳಿದ್ದವು. ಆದರೆ ಎರಡನೇ ದಿನದಾಟದಲ್ಲಿ 209 ರನ್ ಗಳಿಗೆ ಕೇವಲ ಮೂರು ವಿಕೆಟ್ ಉರುಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.