ಕೊಹ್ಲಿ ಜತೆಗಿನ ಸ್ನೇಹ ವರ್ಣಿಸಲು ರಾಜಕೀಯ ಅಡ್ಡಿ: ಅಫ್ರಿದಿ
Team Udayavani, Feb 11, 2018, 6:30 AM IST
ಹೊಸದಿಲ್ಲಿ: ಎರಡೂ ರಾಷ್ಟ್ರಗಳ ನಡುವಿನ ರಾಜಕೀಯ ಪರಿಸ್ಥಿತಿಯಿಂದಾಗಿ ವಿರಾಟ್ ಕೊಹ್ಲಿ ಜತೆಗಿನ ಸ್ನೇಹವನ್ನು ಬಣ್ಣಿಸಲು ಸಾಧ್ಯವಾಗುತ್ತಿಲ್ಲ ಎಂದು ಪಾಕಿಸ್ಥಾನ ತಂಡದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿದ್ದಾರೆ.
ಉಭಯ ರಾಷ್ಟ್ರಗಳ ರಾಜಕೀಯ ಬಿಕ್ಕಟ್ಟಿನ ಬಗ್ಗೆ ತಿಳಿದಿದೆ. ಆದರೆ ಕ್ರಿಕೆಟ್‌ನಲ್ಲಿ ಎರಡೂ ರಾಷ್ಟ್ರಗಳ ನಡುವೆ ಗಡಿ ಮೀರಿದ ಸಂಬಂಧವಿದೆ. ವಿರಾಟ್ ಕೊಹ್ಲಿ ಅದ್ಭುತ ಆಟಗಾರ. ಅಷ್ಟೇ ಅಲ್ಲ, ಅತ್ಯುತ್ತಮ ಮಾನವೀಯ ವ್ಯಕ್ತಿ. ಕೊಹ್ಲಿ ತಮ್ಮ ಹಸ್ತಾಕ್ಷರವುಳ್ಳ ಜೆರ್ಸಿಯನ್ನು ನನ್ನ ಫೌಂಡೇಷನ್‌ಗೆ ನೀಡಿದ್ದರು. ಹೀಗಾಗಿ ಅವರ ಬಗ್ಗೆ ಬಹಳ ಗೌರವವಿದೆ. ನಾನು ಪಾಕಿಸ್ಥಾನವನ್ನು ಹೊರತುಪಡಿಸಿದರೆ, ಭಾರತ ಮತ್ತು ಆಸ್ಟ್ರೇಲಿಯದಿಂದ ಅತಿ ಹೆಚ್ಚು ಪ್ರೀತಿ ಮತ್ತು ಗೌರವವನ್ನು ಪಡೆದಿದ್ದೇನೆ ಎಂದು ಶಾಹಿದ್ ಅಫ್ರಿದಿ ಹೇಳಿದರು. ವಿರಾಟ್ ಕೊಹ್ಲಿಗೆ ಪಾಕಿಸ್ಥಾನದಲ್ಲಿ ಭಾರೀ ಸಂಖ್ಯೆಯ ಅಭಿಮಾನಿಗಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.