ರಾಷ್ಟ್ರಮಟ್ಟದ ಸಾಧನೆ ಮಾಡಿದ ಸ್ವಾತಿ
Team Udayavani, Mar 26, 2018, 6:30 AM IST
ಕಾರ್ಕಳ: ಕ್ರೀಡಾ ಕ್ಷೇತ್ರದಲ್ಲಿ ಕಡಿಮೆ ಅವಧಿಯಲ್ಲೇ ರಾಷ್ಟ್ರಮಟ್ಟದ ಸಾಧನೆ ಮಾಡಿದವರು ವಿರಳ. ಕ್ರೀಡೆಯಲ್ಲಿ ಸಾಧಿಸಲು ಅನೇಕ ವರ್ಷಗಳ ತರಬೇತಿ ಪಡೆಯಬೇಕಾಗುತ್ತದೆ. ಆದರೆ ಕೇವಲ ಏಳು ತಿಂಗಳ ಅಭ್ಯಾಸದಲ್ಲಿಯೇ ಕಾರ್ಕಳದ ಪವರ್ ಲಿಫ್ಟಿಂಗ್ ಪಟು ಸ್ವಾತಿ ರಾಷ್ಟ್ರಮಟ್ಟದಲ್ಲಿ ಮಿಂಚಿದ್ದಾರೆ .
ಕಳೆದ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಸ್ವಾತಿ 2 ಚಿನ್ನ ಪಡೆದಿದ್ದರು. ಅನಂತರ ಇತ್ತೀಚೆಗೆ ರಾಂಚಿಯಲ್ಲಿ ನಡೆದ ರಾಷ್ಟ್ರಮಟ್ಟದ 57 ಕೆ.ಜಿ. ವಿಭಾಗದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಎರಡು ಕಂಚಿನ ಪದಕ ಪಡೆದು ರಾಷ್ಟ್ರಮಟ್ಟದಲ್ಲೂ ಮಿಂಚಿದ್ದಾರೆ.
ಕಾರ್ಕಳದ ಎಸ್‌ವಿಟಿ ಕಾಲೇಜಿನ ಹಳೆ ವಿದ್ಯಾರ್ಥಿನಿ ಯಾಗಿರುವ ಸ್ವಾತಿ ಕಾಲೇಜಿನಲ್ಲಿರುವಾಗ ರೆಸ್ಲಿಂಗ್, ಜಿಮ್ ಅಭ್ಯಾಸ ನಡೆಸುತ್ತಿದ್ದರು. ಮಂಗಳೂರು ವಿವಿಯ ಅಂತರ್ ಕಾಲೇಜು ಮಟ್ಟದ ಕುಸ್ತಿಯಲ್ಲಿ ಒಂದು ಚಿನ್ನ ಹಾಗೂ ಕಂಚಿನ ಪದಕ ಗೆದ್ದ ಕೀರ್ತಿಯೂ ಸ್ವಾತಿಯದ್ದಾಗಿದೆ.
ಪವರ್ ಲಿಫ್ಟಿಂಗ್ ಆಸಕ್ತಿ
ಪವರ್‌ಲಿಫ್ಟಿಂಗ್‌ನಲ್ಲಿ ಪ್ರದೀಪ್ ಕುಮಾರ್, ವಿಶ್ವನಾಥ ಭಾಸ್ಕರ್ ಗಾಣಿಗ ಅವರ ಸಾಧನೆ ನೋಡಿ ಸ್ಫೂರ್ತಿಗೊಂಡಿದ್ದೆ. ಹೀಗಾಗಿ ಪವರ್ ಲಿಫ್ಟಿಂಗ್‌ನಲ್ಲಿ ಮತ್ತಷ್ಟು ಆಸಕ್ತಿ ಹುಟ್ಟಿಕೊಂಡಿದೆ. ಪ್ರದೀಪ್ ಅವರಿಂದಲೇ ತರಬೇತಿ ಪಡೆಯುತ್ತಿದ್ದೇನೆ. ತರಬೇತಿಗಾಗಿ ಪ್ರತೀದಿನ ಮಂಗಳೂರಿಗೆ ತೆರಳುತ್ತಿದ್ದೇನೆ. ನನ್ನ ಬೆಳವಣಿಗೆಯಲ್ಲಿ ಸತೀಶ್ ಕುಮಾರ್ ಕುದ್ರೋಳಿ ಅವರ ಸಹಕಾರವಿದೆ. 2017ರಲ್ಲಿ ಪದವಿ ಶಿಕ್ಷಣ ಪೂರ್ಣಗೊಳಿಸಿದ್ದು, ಕೆಎಎಸ್ ಪರೀಕ್ಷೆ ಬರೆಯಲೂ ತಯಾರಿ ನಡೆಸುತ್ತಿದ್ದೇನೆ ಎನ್ನುತ್ತಾರೆ ಸ್ವಾತಿ.
ರಾಷ್ಟ್ರೀಯ ಪಂದ್ಯದಲ್ಲಿ ಕಂಚಿನ ಪದಕ ಗಳಿಸಿದ ಸ್ವಾತಿ ಮುಂದೆ ದುಬೈಯಲ್ಲಿ ನಡೆಯಲಿರುವ ಏಷ್ಯಾನ್ ಪವರ್ ಲಿಫ್ಟಿಂಗ್‌ನಲ್ಲಿ ಭಾಗವಹಿಸುವ ಗುರಿ ಹೊಂದಿದ್ದಾರೆ. ಸಪ್ಟೆಂಬರ್ ತಿಂಗಳಲ್ಲಿ ಪಂದ್ಯ ನಡೆಯಲಿದೆ. ಅದಕ್ಕೂ ಮುನ್ನ ನಡೆಯುವ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ನಿರಂತರ ಅಭ್ಯಾಸದಲ್ಲಿ ತೊಡಗಿದ್ದಾರೆ.
ಬಡತನದ ಹಾದಿ…
ಸ್ವಾತಿ ಬಡತನದ ಕುಟುಂಬದಿಂದ ಬೆಳೆದು ಬಂದವರು. ಅವರ ತಾಯಿ ಬಟ್ಟೆಯ ಅಂಗಡಿ ನಡೆಸು ತ್ತಿದ್ದಾರೆ. ಹೀಗಾಗಿ ಸಂಸಾರ ನಡೆಸಲು ಹಾಗೂ ಇತರ ಖರ್ಚುವೆಚ್ಚಗಳಿಗೆ ತಾಯಿಯೇ ಆಸರೆ. ಬಾಡಿಗೆ ಮನೆಯಲ್ಲಿಯೇ ನೆಲೆಸಿದ್ದಾರೆ. ರಾಷ್ಟ್ರಮಟ್ಟದ ಸಾಧನೆ ಹಿಂದೆ ತಾಯಿಯ ಪಾತ್ರ ಪ್ರಮುಖವಾಗಿದೆ. ಪವರ್ ಲಿಫ್ಟಿಂಗ್‌ಗೆ ಹೆಣ್ಣು ಮಕ್ಕಳನ್ನು ಕಳಿಸುವುದು ಕಡಿಮೆ. ಆದರೆ ಅಮ್ಮ ಮಾತ್ರ ನನಗೆ ಎಲ್ಲ ರೀತಿಯ ಪ್ರೋತ್ಸಾಹ ನೀಡಿ ಕಳುಹಿಸಿದ್ದಾರೆ. ಪವರ್ ಲಿಫ್ಟರ್ ಆಗಬೇಕಾದರೆ ಹೆಚ್ಚು ಖರ್ಚುವೆಚ್ಚದ ಆವಶ್ಯಕತೆಯೂ ಇದೆ. ಇದೆಲ್ಲವೂ ತನ್ನ ತಾಯಿಯಿಂದಲೇ ದೊರೆಯ ಬೇಕಾಗಿದೆ. ಎಲ್ಲವನ್ನೂ ಅವರು ನೀಡಿದ್ದಾರೆ.
– ಜೀವೇಂದ್ರ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್.. ಫೋಟೋ ವೈರಲ್.!
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.