ಚಿನ್ನ ಗೆದ್ದ ಪ್ರದೀಪ್ ಸಿಂಗ್ ಕಾಮನ್‌ವೆಲ್ತ್ ಗೇಮ್ಸ್‌ಗೆ ಅರ್ಹತೆ
Team Udayavani, Sep 10, 2017, 7:20 AM IST
ಹೊಸದಿಲ್ಲಿ: ಆಸ್ಟ್ರೇಲಿಯದ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಟ್‌ಲಿಫ್ಟಿಂಗ್ ಸ್ಪರ್ಧೆ ಕೊನೆಯ ಐದು ದಿನಗಳಲ್ಲಿ 34 ಭಾರತೀಯ ಲಿಫ್ಟರ್‌ಗಳು ನೂತನ ದಾಖಲೆ ನಿರ್ಮಿಸಿದ ಸಾಧನೆ ಮಾಡಿದ್ದಾರೆ. ಪ್ರದೀಪ್ ಸಿಂಗ್ ಚಿನ್ನ ಗೆಲ್ಲುವ ಮೂಲಕ ಮುಂದಿನ ವರ್ಷದ ಕಾಮನ್‌ವೆಲ್ತ್ ಗೇಮ್ಸ್‌ಗೆ ಅರ್ಹತೆ ಗಳಿಸಿದ್ದಾರೆ.
ಸ್ಪರ್ಧೆಯ ಅಂತಿಮ ದಿನ ಭಾರತ ಎರಡು ಚಿನ್ನ, ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗೆದ್ದುಕೊಂಡಿದೆ. 105 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ ಪ್ರದೀಪ್ ಸ್ನ್ಯಾಚ್‌ನಲ್ಲಿ 147 ಕೆ.ಜಿ. ಮತ್ತು ಕ್ಲೀನ್ ಆ್ಯನ್x ಜರ್ಕ್‌ನಲ್ಲಿ 195 ಕೆ.ಜಿ. ಎತ್ತಿ ಚಿನ್ನ ಗೆದ್ದರು. ಈ ಸಾಧನೆ ವೇಳೆ ಅವರು ಸ್ನ್ಯಾಚ್‌ನಲ್ಲಿ ರಾಷ್ಟ್ರೀಯ ಸೀನಿಯರ್ ದಾಖಲೆ ನಿರ್ಮಿಸಿದರು.
+105 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ ಗುರುದೀಪ್ ಸಿಂಗ್ ಒಟ್ಟು 371 ಕೆ.ಜಿ. ಎತ್ತಿ ಕಂಚಿನ ಪದಕ ಪಡೆದರು. ಸ್ನ್ಯಾಚ್‌ನಲ್ಲಿ ಅವರು ನೂತನ ದಾಖಲೆ ನಿರ್ಮಿಸಿದ್ದಾರೆ.ಜೂನಿಯರ್ ಪುರುಷರ ವಿಭಾಗದ 105 ಕೆ.ಜಿ. ವಿಭಾಗದಲ್ಲಿ ಲವ್‌ಪ್ರೀತ್ ಸಿಂಗ್ ಒಟ್ಟು 325 ಕೆ.ಜಿ. ಎತ್ತಿ ಚಿನ್ನ ಗೆದ್ದರೆ ತೇಜ್‌ಪಾಲ್ ಸಿಂಗ್ ಸಂಧು ಕಂಚು ಪಡೆದರು. ಜೂನಿಯರ್ ವನಿತಾ ವಿಭಾಗದಲ್ಲಿ ಪೂರ್ಣಿಮಾ ಪಾಂಡೆ ಬೆಳ್ಳಿಯ ಪದಕ ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್ ಆಫ್ ಸ್ಪಿನ್ನರ್ ಎಂಟ್ರಿ
Team India: ಹೊಸ ಕೋಚ್ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್ ನಲ್ಲಿ ಪೀಟರ್ಸನ್
Ranji Trophy: ಭಾರತ ಕ್ರಿಕೆಟ್ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?
ICC Champions Trophy: ಚಾಂಪಿಯನ್ಸ್ ಟ್ರೋಫಿ ಉದ್ಘಾಟನೆ: ಹಾಜರಿರುವರೇ ಭಾರತದ ನಾಯಕ?
Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್ ಫೈನಲ್‌ಗೆ
MUST WATCH
ಹೊಸ ಸೇರ್ಪಡೆ
ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.