ಶ್ರೀಕಾಂತ್‌ಗೆ ಆಘಾತ; ಪ್ರಣಯ್‌ಗೆ ಪ್ರಶಸ್ತಿ
Team Udayavani, Nov 9, 2017, 7:20 AM IST
ನಾಗ್ಪುರ: ವಿಶ್ವದ ಎರಡನೇ ರ್‍ಯಾಂಕಿನ ಕಿದಂಬಿ ಶ್ರೀಕಾಂತ್ ಅವರನ್ನು ಮೂರು ಗೇಮ್‌ಗಳ ಹೋರಾಟದಲ್ಲಿ ಸೋಲಿಸಿದ ಎಚ್‌ಎಸ್ ಪ್ರಣಯ್ ಅವರು ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಸಿಂಗಲ್ಸ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಈ ವರ್ಷ ನಾಲ್ಕು ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಕೂಟದ ಪ್ರಶಸ್ತಿ ಗೆದ್ದ ಸಂಭ್ರಮದಲ್ಲಿದ್ದ ಶ್ರೀಕಾಂತ್ ಅವರನ್ನು 21-15, 16-21, 21-7 ಗೇಮ್‌ಗಳಿಂದ ಆಘಾತಗೊಳಿಸಿದ ವಿಶ್ವದ 11ನೇ ರ್‍ಯಾಂಕಿನ ಪ್ರಣಯ್ ಪ್ರಶಸ್ತಿ ಜಯಿಸಿದ ಸಾಧನೆ ಮಾಡಿದರು.
ಮೊದಲ ಗೇಮ್‌ನಲ್ಲಿ 3-0 ಮುನ್ನಡೆ ಸಾಧಿಸುವ ಮೂಲಕ ಶ್ರೀಕಾಂತ್ ಉತ್ತಮ ಆರಂಭ ಪಡೆದಿದ್ದರು. ಆದರೆ ಆಬಳಿಕ ಪಂದ್ಯದಲ್ಲಿ ಹಿಡಿತ ಸಾಧಿಸಿದ ಪ್ರಣಯ್ ತೀವ್ರ ಪೈಪೋಟಿಯಿಂದ ಹೋರಾಡಿ 7-7 ಸಮಬಲ ಸಾಧಿಸಿ ಮುನ್ನಡೆದರು.
ಅಂತಿಮವಾಗಿ 21-15ರಿಂದ ಮೊದಲ ಗೇಮ್ ವಶಪಡಿಸಿಕೊಂಡರು. ದ್ವಿತೀಯ ಗೇಮ್‌ನಲ್ಲಿ ಶ್ರೀಕಾಂತ್ ವೀರೋಚಿತ ಆಟ ಆಡಿದರು. ಆದರೂ ಪ್ರಣಯ್ 13-13 ಅಂಕಗಳ ತನಕ ಸಮಬಲದ ಹೋರಾಟ ನೀಡಿದ್ದರು. ನಿರ್ಣಾಯಕ ತೃತೀಯ ಗೇಮ್‌ನಲ್ಲಿ ಮತ್ತೆ ಮೇಲುಗೈ ಸಾಧಿಸಿದ ಪ್ರಣಯ್ ಸುಲಭವಾಗಿ ಗೆದ್ದು ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.