ಏಕದಿನದಲ್ಲಿ ಪೃಥ್ವಿ ಶಾ ದ್ವಿಶತಕ, ಸೂರ್ಯಕುಮಾರ್ ಭರ್ಜರಿ ಶತಕ: 457 ರನ್ ಗಳಿಸಿದ ಮುಂಬೈ !
Team Udayavani, Feb 25, 2021, 1:37 PM IST
ಜೈಪುರ: ಇಲ್ಲಿನ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಇಂದು ನಡೆದ ವಿಜಯ್ ಹಜಾರೆ ಪಂದ್ಯ ಟಿ20 ಪಂದ್ಯದಂತೆ ನಡೆಯಿತು. ಕಾರಣ ಮುಂಬೈ ಆಟಗಾರರಾದ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್!
ಪುದುಚೇರಿ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ತಂಡ 50 ಓವರ್ ಗಳಲ್ಲಿ ಬರೋಬ್ಬರಿ 457 ರನ್ ಗಳಿಸಿತು. ಪೃಥ್ವಿ ಶಾ ಭರ್ಜರಿ ದ್ವಿಶತಕ ಬಾರಿಸಿದರೆ, ಸೂರ್ಯಕುಮಾರ್ ಯಾದವ್ ಶತಕ ಗಳಿಸಿದರು.
ಇದನ್ನೂ ಓದಿ:ಮೊಟೆರಾ ಸ್ಟೇಡಿಯಂ ಬಗ್ಗೆ ವಿರಾಟ್ ಕೊಹ್ಲಿ ಅಸಮಾಧಾನ!
152 ಎಸೆತ ಎದುರಿಸಿದ ಶಾ ಅಜೇಯ 227 ರನ್ ಗಳಿಸಿದರು. ಬರೋಬ್ಬರಿ 31 ಬೌಂಡರಿ ಮತ್ತು ಐದು ಸಿಕ್ಸರ್ ಗಳು ಶಾ ಬ್ಯಾಟಿಂದ ಬಂತು. ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಕೇವಲ 58 ಎಸೆತಗಳಿಂದ 133 ರನ್ ಗಳಿಸಿದರು. 22 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳನ್ನು ಸೂರ್ಯಕುಮಾರ್ ಬಾರಿಸಿದರು.
ಉಳಿದಂತೆ ಆದಿತ್ಯ ತಾರೆ 56 ರನ್ ಗಳಿಸಿದರು. ಪುದುಚೇರಿ ಪರ ಮೂವರು ಬೌಲರ್ ಗಳು 80ಕ್ಕಿಂತ ಹೆಚ್ಚು ರನ್ ಬಿಟ್ಟುಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.