ಪ್ರೊ ಕಬಡ್ಡಿ-7: ಇಂದು ಉದ್ಘಾಟನೆ, ನಾಳೆಯಿಂದ ಸ್ಪರ್ಧೆ
ಹೈದರಾಬಾದ್‌ನಲ್ಲಿ ಕೂಟಕ್ಕೆ ಚಾಲನೆ ; ನಾಳೆ ಚಾಂಪಿಯನ್ ಬುಲ್ಸ್‌ಗೆ ಪಾಟ್ನಾ ಎದುರಾಳಿ
Team Udayavani, Jul 19, 2019, 5:18 AM IST
ಹೈದರಾಬಾದ್: ಪ್ರೊ ಕಬಡ್ಡಿ 7ನೇ ಆವೃತ್ತಿ ಹೈದರಾಬಾದ್‌ನಲ್ಲಿ ಶುಕ್ರವಾರ ಉದ್ಘಾಟ ನೆಗೊಳ್ಳಲಿದೆ. ಶನಿವಾರದಿಂದ ಪಂದ್ಯಗಳು ಅಧಿಕೃ ತವಾಗಿ ಆರಂಭವಾಗಲಿವೆ. ಮೊದಲ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ತಂಡ ವನ್ನು ಯು ಮುಂಬಾ ಎದುರಿಸಲಿದೆ. ಅದೇ ದಿನ ನಡೆಯಲಿರುವ ಮತ್ತೂಂದು ಪಂದ್ಯದಲ್ಲಿ ಹಾಲಿ ಚಾಂಪಿಯನ್ ಬೆಂಗಳೂರು ಬುಲ್ಸ್ ಹಾಗೂ ಪಾಟ್ನಾ ಪೈರೇಟ್ಸ್ ತಂಡಗಳು ಸೆಣಸಾಟ ನಡೆಸಲಿವೆ.
ಹೈದರಾಬಾದ್‌ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಈ ಪಂದ್ಯಗಳು ಸಾಗಲಿವೆ. ಭರ್ತಿ 3 ತಿಂಗಳ ಕಾಲ 12 ತಂಡಗಳು, 12 ನಗರಗಳಲ್ಲಿ ಕಾಲೆಳೆದಾಟದ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿವೆ.
2 ವರ್ಷದ ಬಳಿಕ ಬೆಂಗಳೂರಲ್ಲಿ ಪಂದ್ಯ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆತಿಥೇಯ ಬೆಂಗಳೂರು ಬುಲ್ಸ್‌ಗೆ ಆತಿಥ್ಯ ವಹಿಸಲು ಕಳೆದೆರಡು ವರ್ಷ ಅವಕಾಶ ಸಿಕ್ಕಿರಲಿಲ್ಲ. ಇದರಿಂದ ಬೆಂಗಳೂರು ಪಂದ್ಯಗಳು 2017ರಲ್ಲಿ ನಾಗ್ಪುರಕ್ಕೆ ವರ್ಗಾವಣೆಗೊಂಡಿದ್ದವು.
2018ರಲ್ಲೂ ಬೆಂಗಳೂರಿನಲ್ಲಿ ಪಂದ್ಯಗಳ ಆತಿಥ್ಯ ವಹಿಸಲು ಸಾಧ್ಯವಾಗದೆ ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಕಂಠೀರವ ಕ್ರೀಡಾಂಗಣದಲ್ಲಿ ಬೇರೆ ಕೂಟ ಇದ್ದುದರಿಂದ ಪ್ರೊ ಕಬಡ್ಡಿಗೆ ಅವಕಾಶ ನೀಡಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೇಳಿತ್ತು. ಒಟ್ಟಾರೆ ಎಲ್ಲ ಬೆಳವಣಿಗೆಗಳಿಂದ ರಾಜ್ಯದ ಕಬಡ್ಡಿ ಅಭಿಮಾನಿಗಳು ಬೇಸರಕ್ಕೆ ಒಳಗಾಗಿದ್ದರು. ಇದೀಗ ಮತ್ತೆ ಬೆಂಗಳೂರಿಗೆ ಆತಿಥ್ಯದ ಅವಕಾಶ ಸಿಕ್ಕಿದೆ. ಹೀಗಾಗಿ ಅಭಿಮಾನಿಗಳು ಬಹಳ ಖುಷಿಯಿಂದ ಪಂದ್ಯ ವೀಕ್ಷಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಬೆಂಗಳೂರು ಆವೃತ್ತಿಯ ಪಂದ್ಯಗಳು ಆ. 31ರಿಂದ ಆರಂಭವಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.