ಈ ಸಲವೂ ಬೆಂಗಳೂರಿಗಿಲ್ಲ ಪ್ರೊ ಕಬಡ್ಡಿ ಆತಿಥ್ಯ

Team Udayavani, Oct 16, 2018, 6:00 AM IST

z-35.jpg

ಬೆಂಗಳೂರು: ಆರನೇ ಆವೃತ್ತಿ ಪ್ರೊ ಕಬಡ್ಡಿ ಕೂಟ ಶುರುವಾಗಿ 16 ಪಂದ್ಯಗಳು ಮುಗಿದಿವೆ. ಇದರ ನಡುವೆ ಬೆಂಗಳೂರು ಬುಲ್ಸ್‌ ತಂಡದ ಅಭಿಮಾನಿಗಳಿಗೊಂದು ಕಹಿ ಸುದ್ದಿ. ಈ ಬಾರಿಯಾದರೂ ಬೆಂಗಳೂರಿನಲ್ಲಿ ಕಬಡ್ಡಿ ಪಂದ್ಯಗಳು ನಡೆಯಬಹುದೆನ್ನುವ ಭರವಸೆ ಸುಳ್ಳಾಗಿದೆ. ಅನಿವಾರ್ಯ ಕಾರಣಗಳಿಂದ ಬೆಂಗಳೂರಿನಲ್ಲಿ ಪಂದ್ಯ ನಡೆಯುವುದಿಲ್ಲವೆಂದು ಸ್ವತಃ ಬೆಂಗಳೂರು ಬುಲ್ಸ್‌ ತಂಡದ ಸಿಇಒ ಉದಯ್‌ ಸಿನ್ಹಾ “ಉದಯವಾಣಿ’ಗೆ ಖಚಿತಪಡಿಸಿದ್ದಾರೆ.

ನ. 23ರಿಂದ ನ. 29ರ ವರೆಗೆ ಬೆಂಗಳೂರು ಚರಣದ ಪಂದ್ಯಗಳು ನಡೆಯಬೇಕಿತ್ತು. ವೇಳಾಪಟ್ಟಿ ಪ್ರಕಟಗೊಂಡಿದ್ದರೂ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುತ್ತದೋ, ಇಲ್ಲವೋ ಎನ್ನುವುದು ಖಾತ್ರಿಯಾಗಿರಲಿಲ್ಲ. ಆದರೀಗ ಸತತ 2ನೇ ವರ್ಷವೂ ಬೆಂಗಳೂರಿನಲ್ಲಿ ಪಂದ್ಯ ನಡೆಯದಿರುವುದು ಖಚಿತವಾಗಿದೆ. ಪ್ರೊ ಕಬಡ್ಡಿ ಆರಂಭಿಕ ಆವೃತ್ತಿಯ ಬೆಂಗಳೂರು ಚರಣದ ಪಂದ್ಯಗಳು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದವು. ಆದರೆ ಕಳೆದ ಆವೃತ್ತಿಯಲ್ಲಿ ಕಂಠೀರವದಲ್ಲಿ ಪಂದ್ಯ ಆಯೋಜಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿಯೂ ಪಂದ್ಯ ನಡೆಸಲು ಅನುಮತಿ ಸಿಕ್ಕಿಲ್ಲವೆಂದು ಉದಯ್‌ ಸಿನ್ಹಾ ಹೇಳಿದ್ದಾರೆ.

ಅನುಮತಿ ನಿರಾಕರಣೆ
ಕಂಠೀರವದಲ್ಲಿ ಪಂದ್ಯ ನಡೆಸಲು 2 ತಿಂಗಳು ಮುಂಚೆಯೇ ಅನುಮತಿ ಕೇಳಿದ್ದೇವೆ. ಆದರೆ ಯಾವ ಕಾರಣದಿಂದ ಅನುಮತಿ ನಿರಾಕರಿಸಲಾಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ನಮ್ಮೆಲ್ಲ ಪ್ರಯತ್ನದ ಬಳಿಕವೂ ರಾಜ್ಯ ಕ್ರೀಡಾ ಇಲಾಖೆ ಪಂದ್ಯ ನಡೆಸಲು ಅನುಮತಿ ನೀಡಿಲ್ಲ. ಇದರಿಂದ ಅಭಿಮಾನಿಗಳಿಗೆ ಬಹಳ ನೋವಾಗಿದೆ. ಜತೆಗೆ ನಮಗೆ ಆರ್ಥಿಕವಾಗಿ ತೀವ್ರ ನಷ್ಟವಾಗಿದೆ ಎಂದು ಸಿನ್ಹಾ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಕಂಠೀರವ ಒಳಾಂಗಣ ಕ್ರೀಡಾಂಗಣ, ಪಂದ್ಯಗಳನ್ನು ನಡೆಸಲು ಎಲ್ಲ ರೀತಿಯಲ್ಲೂ ಸೂಕ್ತವಾಗಿದೆ. ವಾಹನಗಳ ನಿಲುಗಡೆಗೆ ಅವಕಾಶವಿದೆ. ಆ ಸ್ಥಳದಲ್ಲಿ ಟ್ರಾಫಿಕ್‌ ಕೂಡ ಸಮಸ್ಯೆಯಲ್ಲ. ಹೀಗಾಗಿ ಅಭಿಮಾನಿಗಳಿಗೂ ಅನುಕೂಲಕರ. ಇದನ್ನು ಹೊರತುಪಡಿಸಿದರೆ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಬಹುದು. ಆದರೆ ಅಲ್ಲಿ ಟ್ರಾಫಿಕ್‌ ಸಮಸ್ಯೆ ಜಾಸ್ತಿ. ಅಲ್ಲದೇ ವಾಹನ ನಿಲುಗಡೆಗೆ ಸ್ಥಳಾವಕಾಶವಿಲ್ಲ ಎನ್ನುವುದು ಉದಯ್‌ ಸಿನ್ಹಾ ವಿವರಣೆ.

ಚೆನ್ನೈ, ವಿಶಾಖಪಟ್ಟಣ, ಪುಣೆ ನಡುವೆ ಆಯ್ಕೆ
ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಡಿಸಲು ಅನುಮತಿ ಸಿಕ್ಕಿಲ್ಲದಿರು ವುದರಿಂದ ಬೇರೆ ಸ್ಥಳಕ್ಕಾಗಿ ಬೆಂಗಳೂರು ಬುಲ್ಸ್‌ ಹುಡುಕಾಟ ನಡೆಸಿದೆ. ಕಳೆದ ಬಾರಿ ನಾಗ್ಪುರದಲ್ಲಿ ಪಂದ್ಯಗಳನ್ನು ನಡೆಸಲಾಗಿತ್ತು. ಈ ಬಾರಿ ಅಲ್ಲಿ ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಚೆನ್ನೈ, ವಿಶಾಖಪಟ್ಟಣ ಅಥವಾ ಪುಣೆಯ ನಡುವೆ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಳ್ಳಲು ಬುಲ್ಸ್‌ ಚಿಂತನೆ ನಡೆಸಿದೆ.

ಟಾಪ್ ನ್ಯೂಸ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.