![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 10, 2022, 6:07 PM IST
ನವದೆಹಲಿ: ಭಾರತೀಯ ಒಲಿಂಪಿಕ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ದಂತಕಥೆ ಒಟಗಾರ್ತಿ ಪಿಟಿ ಉಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದರೊಂದಿಗೆ ಐಒಎ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಿಟಿ ಉಷಾ ಅವರು ಪಾತ್ರರಾಗಿದ್ದಾರೆ.
58 ವರ್ಷದ ಉಷಾ ಅವರು ಅನೇಕ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮತ್ತು 1984ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನ 400 ಮೀ. ಹರ್ಡಲ್ಸ್ ಫೈನಲ್‌ನಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದರು. ಭಾರತ ಮತ್ತು ಏಷ್ಯಾ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಸುಮಾರು 20 ವರ್ಷಗಳ ಕಾಲ ಹಲವು ಸಾಧನೆ ಮಾಡಿದ ಉಷಾ 2000ರಲ್ಲಿ ಕ್ರೀಡಾ ಬದುಕಿನಿಂದ ನಿವೃತ್ತರಾದರು.
ಸುಪ್ರೀಂ ಕೋರ್ಟ್‌ನಿಂದ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಅವರ ಮೇಲ್ವಿಚಾರಣೆಯಲ್ಲಿ ಚುನಾವಣೆ ನಡೆಯಿತು.
‘ಪಯ್ಯೋಳಿ ಎಕ್ಸ್‌ಪ್ರೆಸ್’ ಖ್ಯಾತಿಯ ಕೇರಳದ ಉಷಾ ಅವರನ್ನು ಭಾರತೀಯ ಜನತಾ ಪಕ್ಷವು ಜುಲೈನಲ್ಲಿ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿತ್ತು.
ಮಹಾರಾಜ ಯಾದವೀಂದ್ರ ಸಿಂಗ್ ಬಳಿಕ ಐಒಎ ಅಧ್ಯಕ್ಷ ಹುದ್ದೆ ವಹಿಸಿಕೊಂಡ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆ ಉಷಾ ಅವರದು. 1938-1960ರ ಅವಧಿಯಲ್ಲಿ ಮಹಾರಾಜ ಯಾದವೀಂದ್ರ ಸಿಂಗ್ ಅಧ್ಯಕ್ಷ ಸ್ಥಾನ ನಿಭಾಯಿಸಿದ್ದರು. ಕ್ರಿಕೆಟಿಗರಾಗಿದ್ದ ಅವರು 1934ರಲ್ಲಿ ಟೆಸ್ಟ್ ಪಂದ್ಯವೊಂದನ್ನು ಆಡಿದ್ದರು.
ನ್ಯಾಷನಲ್ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾದ (ಎನ್‌ಆರ್‌ಎಐ) ಅಜಯ್ ಪಟೇಲ್ ಅವರು ಹಿರಿಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಲಿಂಪಿಕ್ ಪದಕ ವಿಜೇತ ಶೂಟರ್ ಗಗನ್ ನಾರಂಗ್ ಮತ್ತು ರೋಯಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷೆ ರಾಜಲಕ್ಷ್ಮಿ ಸಿಂಗ್ ಡಿಯೋ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಶನ್ (ಐಡಬ್ಲ್ಯುಎಫ್) ಅಧ್ಯಕ್ಷ ಸಹದೇವ್ ಯಾದವ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಅಧ್ಯಕ್ಷ ಮತ್ತು ಮಾಜಿ ಗೋಲ್‌ಕೀಪರ್ ಕಲ್ಯಾಣ್ ಚೌಬೆ ಜಂಟಿ ಕಾರ್ಯದರ್ಶಿಯಾಗಿ (ಪುರುಷ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Thank you for all the messages of support and good wishes. Looking forward to the times ahead! ?? pic.twitter.com/TRlbonoNpQ
— P.T. USHA (@PTUshaOfficial) December 10, 2022
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.