ಪಂಜಾಬ್–ರಾಜಸ್ಥಾನ್ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸ್ಮಿತ್ ಪಡೆ
Team Udayavani, Sep 27, 2020, 7:01 PM IST
ಶಾರ್ಜಾ: ಐಪಿಎಲ್ 13ನೇ ಆವೃತ್ತಿಯ 9ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಮುಖಾಮುಖಿಯಾಗುತ್ತಿದ್ದು ಟಾಸ್ ಗೆದ್ದು ಸ್ಟೀವನ್ ಸ್ಮಿತ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಇತ್ತಂಡಗಳೂ ಈವರೆಗೂ 19 ಬಾರಿ ಮುಖಾಮುಖಿಯಾಗಿದ್ದು 10ರಲ್ಲಿ ರಾಜಸ್ಥಾನ ರಾಯಲ್ಸ್ ಗೆಲುವಿನ ನಗೆ ಬೀರಿದೆ. 9 ಪಂದ್ಯಗಳಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಜಯಿಸುವ ಮೂಲಕ ಸಮಬಲದ ಹೋರಾಟ ನೀಡಿದೆ.
ಇಂದಿನ ಮ್ಯಾಚ್ ಸಾಕಷ್ಟು ಕುತೂಹಲ ಕೆರಳಿಸಿದ್ದು, ರಾಜಸ್ಥಾನ ತಂಡಕ್ಕಿದ್ದು ಎರಡನೇ ಪಂದ್ಯ. ಮೊದಲ ಪಂದ್ಯವನ್ನು ಚೆನ್ನೈ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಜಯಗಳಿಸಿತ್ತು. ಜಾಸ್ ಬಟ್ಲರ್ ತಂಡಕ್ಕೆ ವಾಪಾಸ್ಸಾಗಿದ್ದು ಸಹಜವಾಗಿಯೇ ಉತ್ಸಾಹ ಹೆಚ್ಚಿದೆ.
ಮತ್ತೊಂದೆಡೆ ಮೊದಲ ಪಂದ್ಯವನ್ನು ಸೋತು, ಎರಡನೇ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಅಬ್ಬರಿಸಿರುವ ಪಂಜಾಬ್ ಕೂಡ ಬಲಿಷ್ಟವಾಗಿದೆ. ಕೆ.ಎಲ್ ರಾಹುಲ್ ಅಮೋಘ ಫಾರ್ಮ್ ನಲ್ಲಿದ್ದು, ಮ್ಯಾಕ್ಸ್ ವೆಲ್ ಕೂಡ ಸಿಡಿದೇಳುವ ತವಕದಲ್ಲಿದ್ದಾರೆ. ಪಂಜಾಬ್ ಬೌಲಿಂಗ್ ಕೂಡ ಹರಿತವಾಗಿದ್ದು, ಇಂದಿನ ಸೆಣೆಸಾಟ ಕೂತೂಹಲ ಕೆರಳಿಸಿದೆ.
ಆಡುವ ಹನ್ನೊಂದರ ಬಳಗ
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಾಹುಲ್ ತೆವಾಟಿಯಾ, ರಿಯಾನ್ ಪರಾಗ್, ಟಾಮ್ ಕರ್ರನ್, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಅಂಕಿತ್ ರಾಜ್‌ಪೂತ್
ಕಿಂಗ್ಸ್ ಇಲೆವೆನ್ ಪಂಜಾಬ್ : ಮಾಯಾಂಕ್ ಅಗರ್ವಾಲ್, ಲೋಕೇಶ್ ರಾಹುಲ್ (ನಾಯಕ), ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ಕರುಣ್ ನಾಯರ್, ಸರ್ಫರಾಜ್ ಖಾನ್, ಜೇಮ್ಸ್ ನೀಶಮ್, ಮುರುಗನ್ ಅಶ್ವಿನ್, ರವಿ ಬಿಸ್ನೋಯ್, ಮೊಹಮ್ಮದ್ ಶಮಿ, ಶೆಲ್ಡನ್ ಕಾಟ್ರೆಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು
Asia Cup Hockey: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 11-0 ಅಂತರದ ಜಯ
Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ
Singapore: ವಿಶ್ವ ಚೆಸ್ ಚಾಂಪಿಯನ್‌ಶಿಪ್: ಮೂರನೇ ಪಂದ್ಯದಲ್ಲಿ ಗುಕೇಶ್ ಗೆಲುವು
Badminton: ಸಯ್ಯದ್ ಮೋದಿ ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.