ವರ್ಲ್ಡ್ ಟೂರ್ ಫೈನಲ್ಸ್‌ಪ್ರಶಸ್ತಿ ಸುತ್ತಿಗೆ ಪಿ.ವಿ. ಸಿಂಧು
Team Udayavani, Dec 4, 2021, 9:03 PM IST
ಬಾಲಿ (ಇಂಡೋನೇಷ್ಯಾ): ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ಸಾಧನೆ ಬಳಿಕ ಇತ್ತೀಚೆಗೆ ನಡೆದ ಮಹತ್ವದ ಬ್ಯಾಡ್ಮಿಂಟನ್ ಕೂಟದಲ್ಲಿ ಎಡವುತ್ತಿದ್ದ ಭಾರತದ ಪಿ.ವಿ. ಸಿಂಧು, ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್ ಕೂಟದ ಪ್ರಶಸ್ತಿ ಸುತ್ತು ಪ್ರವೇಶಿಸಿದ್ದಾರೆ. ಈ ಮೂಲಕ ವರ್ಷಾಂತ್ಯದ ಪ್ರಶಸ್ತಿಯ ನಿರೀಕ್ಷೆ ಮೂಡಿಸಿದ್ದಾರೆ.
ಶನಿವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್‌ನಲ್ಲಿ ಸಿಂಧು ಜಪಾನಿನ ಅಕಾನೆ ಯಮಾಗುಚಿ ಅವರನ್ನು 21-15, 15-21, 21-19 ಗೇಮ್‌ಗಳ ಅಂತರದಿಂದ ಮಣಿಸಿದರು. ಇವರಿಬ್ಬರ ಹೋರಾಟ ಒಂದು ಗಂಟೆ, 10 ನಿಮಿಷದ ವರಗೆ ಸಾಗಿತು. ರವಿವಾರ ಪ್ರಶಸ್ತಿ ಸುತ್ತಿನ ಕಾಳಗದಲ್ಲಿ ಸಿಂಧು ದಕ್ಷಿಣ ಕೊರಿಯಾದ ಅನ್ ಸೆಯಂಗ್ ವಿರುದ್ಧ ಸೆಣಸಾಡಲಿದ್ದಾರೆ.
ಸಿಂಧು ಈ ಟೂರ್ನಿಯ ಚೊಚ್ಚಲ ಆವೃತ್ತಿಯಲ್ಲೇ (2018) ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ಜತೆಗೆ ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎನ್ನುವ ಹಿರಿಮೆಗೂ ಪಾತ್ರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.