ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್: ಕ್ವಾ.ಫೈನಲ್ ನಲ್ಲಿ ಸಿಂಧುಗೆ ಆಘಾತ
Team Udayavani, Mar 14, 2020, 8:58 AM IST
ಬರ್ಮಿಂಗ್‌ಹ್ಯಾಮ್: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಕೂಟದಿಂದ ಭಾರತದ ಅಗ್ರ ಶ್ರೇಯಾಂಕಿತ ಮಹಿಳಾ ಸಿಂಗಲ್ಸ್ ಆಟಗಾರ್ತಿ ಪಿ.ವಿ.ಸಿಂಧು ಹೊರನಡೆದಿದ್ದಾರೆ.
ಶುಕ್ರವಾರ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಪಿ.ವಿ.ಸಿಂಧು 21-12, 15-21,
13-21 ಗೇಮ್‌ಗಳ ಅಂತರದಿಂದ ಜಪಾನಿನ ಅಗ್ರ ಶ್ರೇಯಾಂಕಿತ ತಾರೆ ನಜೋಮಿ ಒಕುಹರಾ ವಿರುದ್ಧ ಸೋಲು ಅನುಭವಿಸಿದರು. ಮತ್ತೂಂದು ಪಂದ್ಯದಲ್ಲಿ ಮಹಿಳಾ ಡಬಲ್ಸ್ ಜೋಡಿಯಾದ ಕರ್ನಾಟಕದ ಅಶ್ವಿನಿ ಪೊನ್ನಪ್ಪ -ಎನ್.ಸಿಕ್ಕಿ ರೆಡ್ಡಿ ಹೊರಬಿದ್ದಿದ್ದಾರೆ.
ಶುಕ್ರವಾರ ನಡೆದ ಎರಡನೇ ಸುತ್ತಿನ ಪಂದ್ಯದಲ್ಲಿ ನೇರ ಗೇಮ್‌ಗಳ ಅಂತರದಿಂದ ಜಪಾನಿನ ಮಿಸಾಕಿ ಮಟ್ಸುಟೊಮೊ -ಅಯಾಕಾ ತಕಹಾಶಿ ಜೋಡಿಯ ಎದುರು 13-21, 14-21 ಗೇಮ್ ಗಳ ಅಂತರದಿಂದ ಅಶ್ವಿನಿ ಜೋಡಿ ಸೋಲು ಅನುಭವಿಸಿತು.
ನೇರ ಗೇಮ್ ಆಘಾತ: ವಿಶ್ವ 29 ನೇ ಶ್ರೇಯಾಂಕಿತ ಅಶ್ವಿನಿ ಪೊನ್ನಪ್ಪ -ಎನ್.ಸಿಕ್ಕಿ ರೆಡ್ಡಿ ಎಲ್ಲಿಯೂ ಎಚ್ಚೆತ್ತುಕೊಂಡು ಹೋರಾಟ ನಡೆಸಲಿಲ್ಲ. ಅನಗತ್ಯ ಹೊಡೆಗಳಿಗೆ ಕೈ ಹಾಕಿ ಅಂಕಗಳನ್ನು ಕಳೆದುಕೊಂಡರು. ಮೊದಲ ಸೆಟ್‌ನಲ್ಲಿ 13-21ರಿಂದ ಆಘಾತ ಅನುಭವಿಸಿ 1-0 ಹಿನ್ನಡೆ ಅನುಭವಿಸಿದರು. ಎರಡನೇ ಸೆಟ್‌ನಲ್ಲಿ ಜಪಾನಿ ಆಟಗಾರ್ತಿಯರು ಮೇಲುಗೈ ಸಾಧಿಸಿ ಪಂದ್ಯ ಕೈವಶ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’
MUST WATCH
ಹೊಸ ಸೇರ್ಪಡೆ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.