IND vs SA ಭರತ್- ರಾಹುಲ್ ಇಬ್ಬರಲ್ಲಿ ಯಾರು ಟೆಸ್ಟ್ ಕೀಪರ್?; ದ್ರಾವಿಡ್ ನೀಡಿದರು ಉತ್ತರ
Team Udayavani, Dec 25, 2023, 9:56 AM IST
ಸೆಂಚೂರಿಯನ್: ಟಿ20, ಏಕದಿನ ಸರಣಿಯ ಬಳಿಕ ಇದೀಗ ಭಾರತ ತಂಡವು ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಮಂಗಳವಾರದಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.
ಟೆಸ್ಟ್ ಚಾಂಪಿಯನ್ ಶಿಪ್ ನ ಭಾಗವಾದ ಈ ಸರಣಿಗೆ ಭಾರತವು ಪೂರ್ಣ ಪ್ರಮಾಣದ ತಂಡದೊಂದಿಗೆ ಆಡುತ್ತಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಅವರು ತಂಡಕ್ಕೆ ಮರಳಿದ್ದಾರೆ.
ಆದರೆ ಮೊಹಮ್ಮದ್ ಶಮಿ ಮತ್ತು ರುತುರಾಜ್ ಗಾಯಕ್ವಾಡ್ ಅವರು ಗಾಯದ ಕಾರಣದಿಂದ ಸರಣಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಮಾನಸಿಕ ಒತ್ತಡದ ಕಾರಣದಿಂದ ಇಶಾನ್ ಕಿಶನ್ ಅವರು ತಂಡದಲ್ಲಿಲ್ಲ.
ಯಶಸ್ವಿ ಜೈಸ್ವಾಲ್ ಮತ್ತು ನಾಯಕ ರೋಹಿತ್ ಓಪನಿಂಗ್ ಮಾಡುವ ಸಾಧ್ಯತೆಯಿದೆ, ನಂತರ 3ನೇ ಕ್ರಮಾಂಕದಲ್ಲಿ ಶುಭಮನ್ ಗಿಲ್ ಮತ್ತು 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.
ಸದ್ಯ ಟೀಂ ಇಂಡಿಯಾದಲ್ಲಿ ಇಬ್ಬರು ವಿಕೆಟ್ ಕೀಪರ್ ಗಳಿದ್ದಾರೆ. ಕೆ.ಎಲ್ ರಾಹುಲ್ ಮತ್ತು ಕೆ.ಎಸ್ ಭರತ್. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಯಾರು ವಿಕೆಟ್ ಕೀಪಿಂಗ್ ಮಾಡಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಇದೆ. ಇದಕ್ಕೆ ಕೋಚ್ ರಾಹುಲ್ ದ್ರಾವಿಡ್ ಉತ್ತರ ನೀಡಿದ್ದಾರೆ.
ಕೆ.ಎಲ್ ರಾಹುಲ್ ವಿಕೆಟ್ ಕೀಪಿಂಗ್ ಗ್ಲೌಸ್ ತೊಡಲಿದ್ದಾರೆ ಎಂದು ದ್ರಾವಿಡ್ ಖಚಿತಪಡಿಸಿದ್ದಾರೆ. ಐವತ್ತು ಓವರ್‌ಗಳ ಕ್ರಿಕೆಟ್ ನಲ್ಲಿ ಕೀಪಿಂಗ್ ಮಾಡಿದ ರಾಹುಲ್ ಅವರ ಅನುಭವವು ಟೆಸ್ಟ್‌ಗಳಲ್ಲಿ ಸೂಕ್ತವಾಗಿ ಬರುತ್ತದೆ, ಅವರು ಮೊದಲ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ದ್ರಾವಿಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಇದೊಂದು ರೋಮಾಂಚನಕಾರಿ ಸವಾಲು. ಅವರಿಗೆ ವಿಭಿನ್ನವಾಗಿ ಏನನ್ನಾದರೂ ಮಾಡಲು ಇದು ಒಂದು ಅವಕಾಶ. ಇಶಾನ್ ಲಭ್ಯವಿಲ್ಲದ ಕಾರಣ, ನಾವು ಆಯ್ಕೆ ಮಾಡಲು ಒಂದೆರಡು ಕೀಪರ್‌ಗಳನ್ನು ಹೊಂದಿದ್ದೇವೆ. ರಾಹುಲ್ ತುಂಬಾ ವಿಶ್ವಾಸ ಹೊಂದಿದ್ದಾರೆ. ಅವರು ಅದನ್ನು ಟೆಸ್ಟ್ ನಲ್ಲಿ ಸಾಕಷ್ಟು ಕೀಪಿಂಗ್ ಮಾಡಿಲ್ಲ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಆದರೆ ಅವರು ಐವತ್ತು ಓವರ್ ಗಳಲ್ಲಿ ಕೀಪಿಂಗ್ ಮಾಡಿದ ಅನುಭವ ಹೊಂದಿದ್ದಾರೆ” ಎಂದು ದ್ರಾವಿಡ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.