ಯುವ ಆಟಗಾರರು ನೀಡುವ ತಲೆಬಿಸಿ ಬಗ್ಗೆ ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್
Team Udayavani, Dec 6, 2021, 12:12 PM IST
ಮುಂಬೈ: ಭಾರತ ಟೆಸ್ಟ್ ತಂಡದಲ್ಲಿ ಸಾಕಷ್ಟು ಪೈಪೋಟಿ ನಡೆಯುತ್ತಿರುವುದು ಸಂತಸ ತಂದಿದೆ. ಇದು ಮುಂದುವರಿಯಬೇಕು ಮತ್ತು ಆಟಗಾರರು ತಮ್ಮ ಉತ್ತಮ ಪ್ರದರ್ಶನದಿಂದ ತಂಡದ ಆಯ್ಕೆಗೆ “ತಲೆನೋವು” ಉಂಟುಮಾಡಬೇಕು ಎಂದು ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಡ್ ಅಭಿಪ್ರಾಯಪಟ್ಟಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಭಾರತ ದಾಖಲೆಯ 372 ರನ್‌ಗಳ ಜಯ ಸಾಧಿಸುವ ಮೂಲಕ 1-0 ಸರಣಿಯನ್ನು ವಶಪಡಿಸಿಕೊಂಡಿದೆ.
ತವರಿನಲ್ಲಿ ಭಾರತಕ್ಕೆ ಇದು ಸತತ 14ನೇ ಸರಣಿ ಜಯವಾಗಿದೆ. ಮೊದಲ ಪಂದ್ಯದಲ್ಲಿ ಪದಾರ್ಪಣೆಗೈದ ಶ್ರೇಯಸ್ ಅಯ್ಯರ್ ಶತಕ ಮತ್ತು ಅರ್ಧ ಶತಕ ಬಾರಿಸಿದರೆ, ತಂಡದಲ್ಲಿ ಸ್ಥಾನ ಪಡೆಯಲು ಕಷ್ಟ ಪಡುತ್ತಿದ್ದ ಮಯಾಂಕ್ ಅಗರ್ವಾಲ್ ಎರಡನೇ ಟೆಸ್ಟ್ ನಲ್ಲಿ ಶತಕ ಮತ್ತು ಅರ್ಧಶತಕ ಬಾರಿಸಿದ್ದಾರೆ. ರೋಹಿತ್ ಶರ್ಮಾ ವಿಶ್ರಾಂತಿ ಪಡೆದ ಕಾರಣ ಸ್ಥಾನ ಪಡೆದಿದ್ದ ಶುಭ್ಮನ್ ಗಿಲ್ ಕೂಡಾ ಉತ್ತಮ ಪ್ರದರ್ಶನ ನೀಡಿದ್ದಾರೆ. ಮುಂದಿನ ಸರಣಿಗೆ ರೋಹಿತ್ ಮತ್ತು ಕೆ.ಎಲ್.ರಾಹುಲ್ ಮರಳಿ ಬರುವ ಕಾರಣ ಆರಂಭಿಕ ಎರಡು ಸ್ಥಾನಕ್ಕೆ ಭಾರಿ ಪೈಪೋಟಿ ಏರ್ಪಟ್ಟಿದೆ.
ಇದನ್ನೂ ಓದಿ:ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ
“ಹುಡುಗರು ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳುವುದನ್ನು ನೋಡಲು ಅದ್ಭುತವಾಗಿದೆ. ಜಯಂತ್ ಯಾದವ್ ರವಿವಾರದ ಆಟದಲ್ಲಿ ಕಷ್ಟಪಟ್ಟಿದ್ದರು, ಆದರೆ ಇಂದು ಅದರಿಂದ ಕಲಿತರು. ಮಯಾಂಕ್, ಶ್ರೇಯಸ್, ಸಿರಾಜ್, ಯಾರು ಹೆಚ್ಚು ಅವಕಾಶಗಳನ್ನು ಪಡೆಯುವುದಿಲ್ಲ. ಅಕ್ಷರ್ ಬೌಲಿಂಗ್ ಮಾತ್ರವಲ್ಲದೆ ಬ್ಯಾಟ್‌ನೊಂದಿಗೆ ಅವರ ಬೆಳವಣಿಗೆಯನ್ನು ನೋಡಲು ಅದ್ಭುತವಾಗಿದೆ. ಇದು ನಮಗೆ ಸಾಕಷ್ಟು ಆಯ್ಕೆಗಳನ್ನು ನೀಡುತ್ತದೆ, ನಾವು ಬಲಿಷ್ಠ ತಂಡವಾಗಲು ಸಹಾಯ ಮಾಡುತ್ತದೆ “ಎಂದು ಪಂದ್ಯದ ನಂತರ ದ್ರಾವಿಡ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್‌ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.