ಉತ್ತರಾಖಂಡ್ ಕ್ರಿಕೆಟ್ ಮೈದಾನಕ್ಕೆ ಖಾಸಗಿ ನಿರ್ವಾಹಕರ ಹುಡುಕಾಟ
Team Udayavani, Jan 11, 2018, 11:54 AM IST
ಡೆಹ್ರಾಡೂನ್: ಡೆಹ್ರಾಡೂನ್‌ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಉಸ್ತುವಾರಿ ನೋಡಿಕೊಳ್ಳುವಲ್ಲಿ ಉತ್ತರಾಖಂಡ್ ಸರ್ಕಾರ ವಿಫಲವಾಗಿದೆ. ಪರಿಣಾಮ ಈಗ ಬೇರೆ ದಾರಿ ಇಲ್ಲದೆ ಸರ್ಕಾರ ಖಾಸಗಿ ಒಡೆತನಕ್ಕೆ ಸ್ಟೇಡಿಯಂ ಬಿಟ್ಟು ಕೊಡುವ ಪರಿಸ್ಥಿತಿ ಬಂದೊದಗಿದೆ. ಸೂಕ್ತ ನಿರ್ವಾಹಕರಿಗಾಗಿ ಅದು ಹುಡುಕಾಟ ನಡೆಸಿದೆ. ಆದರೆ ಇದುವರೆಗೆ ಯಾರೂ ಮುಂದೆ ಬಂದಿಲ್ಲ ಎನ್ನಲಾಗಿದೆ.
2016ರಲ್ಲಿ ಕ್ರೀಡಾಂಗಣವನ್ನು ಉದ್ಘಾಟಿಸಲಾಗಿತ್ತು. ತಿಂಗಳ ಬಳಿಕ ಅಧಿಕೃತ ಉದ್ಘಾಟನೆ ನಡೆಯಿತು. ಒಟ್ಟಾರೆ ಸ್ಟೇಡಿಯಂ ನಿರ್ಮಾಣಕ್ಕೆ ಒಟ್ಟು 237 ಕೋಟಿ ರೂ. ಖರ್ಚಾಗಿದೆ. 23 ಎಕರೆ ಜಾಗದಲ್ಲಿ ಸ್ಟೇಡಿಯಂ ನಿರ್ಮಿಸಲಾಗಿದೆ. 25 ಸಾವಿರ ಮಂದಿ ಕುಳಿತು ಪಂದ್ಯ ವೀಕ್ಷಿಸಬಹುದಾಗಿದೆ. ಎಲ್ಲ ಮೂಲಸೌಕರ್ಯ ಅಚ್ಚುಕಟ್ಟಾಗಿದೆ. ಆದರೆ ಸೂಕ್ತ ನಿರ್ವಾಹಕರಿಲ್ಲದೆ ಕ್ರೀಡಾಂಗಣ ಸೊರಗಿದೆ. ಇದುವರೆಗೆ ಇಲ್ಲಿ ಅಂತಾರಾಷ್ಟ್ರೀಯ
ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದಿರುವುದಕ್ಕೆ ಇದು ಪ್ರಮುಖ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.