ನಾಳೆಯಿಂದ ಪಾಕ್-ವಿಶ್ವ ತಂಡದ ನಡುವೆ “ಪುನರುತ್ಥಾನ ಟಿ20′
Team Udayavani, Sep 11, 2017, 6:45 AM IST
ಲಾಹೋರ್: ಮಂಗಳವಾರದಿಂದ ಪಾಕಿಸ್ಥಾನದಲ್ಲಿ ವಿಶ್ವ ತಂಡ ಮತ್ತು ಪಾಕಿಸ್ಥಾನ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯ ಅನಂತರ ಪಾಕಿಸ್ಥಾನದಲ್ಲಿ ಮತ್ತೂಮ್ಮೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವೇದಿಕೆ ನಿರ್ಮಾಣವಾಗಲಿದೆ ಎಂಬ ಆಶಾವಾದವಿದೆ. ಸದ್ಯ ಪಾಕ್‌ನಲ್ಲಿ ಭದ್ರತಾ ಭೀತಿಯಿದ್ದು, ಒಂದು ವೇಳೆ ಈ ವಿಚಾರದಲ್ಲಿ ಪಾಕಿಸ್ಥಾನ ಯಶಸ್ವಿಯಾದರೆ ಮತ್ತೆ ಪಾಕ್ ಕ್ರಿಕೆಟ್‌ನಲ್ಲಿ ಬಲಿಷ್ಠವಾಗಬಹುದು. ಮೂರೂ ಪಂದ್ಯಗಳು ಲಾಹೋರ್‌ನ ಗಡ್ಡಾಫಿ ಕ್ರೀಡಾಂಗಣದಲ್ಲಿ ನಡೆಯಲಿವೆ.
ಕ್ರೀಡಾಂಗಣ 27 ಸಾವಿರ ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ. ಬಿಗಿ ಭದ್ರತೆಗೆ 8 ಸಾವಿರಕ್ಕೂ ಅಧಿಕ ಪೊಲೀಸರನ್ನು ಬಳಸಿಕೊಳ್ಳಲಾಗುತ್ತಿದೆ. ಪಂದ್ಯ ನಡೆಯುವ ಸಂದರ್ಭದಲ್ಲಿ ಆಟಗಾರರ ಬಸ್ ತೆರಳುವ ರಸ್ತೆಯಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತಿದೆ. ಕ್ರೀಡಾಂಗಣದಲ್ಲಿಯೂ ಭಾರೀ ಭದ್ರತೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 2009ರಲ್ಲಿ ಪ್ರವಾಸಿ ಶ್ರೀಲಂಕಾ ಆಟಗಾರರ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಹಲವು ಆಟಗಾರರು ಗಾಯಗೊಂಡರೆ, ಭದ್ರತಾ ಸಿಬಂದಿ ಸಾವನ್ನಪ್ಪಿದ್ದರು. ಅನಂತರ ಪಾಕ್‌ನಲ್ಲಿ ಕ್ರಿಕೆಟ್ ಆಡಲು ಸ್ವತಃ ಐಸಿಸಿಯೇ ನಿರ್ಬಂಧ ಹೇರಿತ್ತು. ಇತರೆ ರಾಷ್ಟ್ರಗಳೂ ಪಾಕ್‌ನಲ್ಲಿ ಆಡಲು ಹಿಂದೇಟು ಹಾಕಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.