ರಣಜಿ: ಕೊನೆಯ ಅವಧಿಯಲ್ಲಿ ಕುಸಿದ ಸೌರಾಷ್ಟ್ರ

Team Udayavani, Mar 10, 2020, 7:20 AM IST

ರಣಜಿ: ಕೊನೆಯ ಅವಧಿಯಲ್ಲಿ ಕುಸಿದ ಸೌರಾಷ್ಟ್ರ

ರಾಜ್‌ಕೋಟ್‌: ಇದೇ ಮೊದಲ ಸಲ ತವರಿನ ಅಂಗಳದಲ್ಲಿ ರಣಜಿ ಟ್ರೋಫಿ ಫೈನಲ್‌ ಪಂದ್ಯ ಆಡಲಿಳಿದಿರುವ ಸೌರಾಷ್ಟ್ರಕ್ಕೆ ಬಂಗಾಲ ಕಡಿವಾಣ ಹಾಕಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ನಡೆಸಿದ ಉನಾದ್ಕತ್‌ ಬಳಗ 80.5 ಓವರ್‌ಗಳಲ್ಲಿ 5 ವಿಕೆಟಿಗೆ 206 ರನ್‌ ಗಳಿಸಿ ಮೊದಲ ದಿನದಾಟ ಮುಗಿಸಿದೆ.

ಪ್ರಮುಖ ಬ್ಯಾಟ್ಸ್‌ಮನ್‌, ಟೆಸ್ಟ್‌ ಸ್ಪೆಷಲಿಸ್ಟ್‌ ಖ್ಯಾತಿಯ ಚೇತೇಶ್ವರ್‌ ಪೂಜಾರ ಜ್ವರದಿಂದ ಕ್ರೀಸ್‌ ತೊರೆದದ್ದು ಸೌರಾಷ್ಟ್ರಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ. 6ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದ ಪೂಜಾರ 24 ಎಸೆತಗಳಿಂದ 5 ರನ್‌ ಮಾಡಿ ಡ್ರೆಸ್ಸಿಂಗ್‌ ರೂಮಿಗೆ ವಾಪಸಾದರು. ಗಂಟಲು ನೋವಿನಿಂದಾಗಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ದ್ವಿತೀಯ ದಿನ ಬ್ಯಾಟಿಂಗ್‌ ನಡೆಸುವ ನಿರೀಕ್ಷೆ ಇದೆ ಎಂದು ಸೌರಾಷ್ಟ್ರ ತಂಡದ ನಾಯಕ ಉನಾದ್ಕತ್‌ ಹೇಳಿದ್ದಾರೆ.

ಭರವಸೆಯ ಆರಂಭ
ಸೌರಾಷ್ಟ್ರದ ಅಗ್ರ ಕ್ರಮಾಂಕದ ಬ್ಯಾಟಿಂಗ್‌ ಉತ್ತಮ ಮಟ್ಟದಲ್ಲೇ ಇತ್ತು. ಒಂದು ಹಂತದಲ್ಲಿ ಎರಡೇ ವಿಕೆಟಿಗೆ 163 ರನ್‌ ಬಾರಿಸಿ ಮುನ್ನುಗ್ಗುತ್ತಿತ್ತು. ಆದರೆ ದಿನದ ಕೊನೆಯ 15 ಓವರ್‌ಗಳಲ್ಲಿ ಬಂಗಾಲ ಬೌಲರ್‌ಗಳು ಭರ್ಜರಿ ಮೇಲುಗೈ ಸಾಧಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು. 43 ರನ್‌ ಅಂತರದಲ್ಲಿ ಸೌರಾಷ್ಟ್ರದ ಕೊನೆಯ 3 ವಿಕೆಟ್‌ ಉರುಳಿದೆ.

ಮಧ್ಯಮ ವೇಗಿ ಆಕಾಶ್‌ ದೀಪ್‌ 41ಕ್ಕೆ 3 ವಿಕೆಟ್‌ ಹಾರಿಸಿ ಹೆಚ್ಚಿನ ಯಶಸ್ಸು ಸಾಧಿಸಿದರು. ಇಶಾನ್‌ ಪೊರೆಲ್‌ ಮತ್ತು ಎಡಗೈ ಸ್ಪಿನ್ನರ್‌ ಶಾಬಾಜ್‌ ನದೀಂ ಒಂದೊಂದು ವಿಕೆಟ್‌ ಉರುಳಿಸಿದರು. 81ನೇ ಓವರಿನಲ್ಲಿ ಚೇತನ್‌ ಸಕಾರಿಯಾ (4) ವಿಕೆಟ್‌ ಬಿದ್ದೊಡನೆ ದಿನದಾಟವನ್ನು ಕೊನೆಗೊಳಿಸಲಾಯಿತು.

ಶೆಲ್ಡನ್‌ ಜಾಕ್ಸನ್‌ ವಿಫ‌ಲ
ಸೌರಾಷ್ಟ್ರ ಆರಂಭಿಕರಾದ ಹಾರ್ವಿಕ್‌ ದೇಸಾಯಿ (38) ಮತ್ತು ಅವಿ ಬರೋಟ್‌ (54) 37.5 ಓವರ್‌ ನಿಭಾಯಿಸಿ 82 ರನ್‌ ಒಟ್ಟುಗೂಡಿಸಿ ಉತ್ತಮ ಅಡಿಪಾಯ ನಿರ್ಮಿಸಿದರು. ಬಳಿಕ ವಿಶ್ವರಾಜ್‌ ಜಡೇಜ (54) ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಆದರೆ ಸೆಮಿಫೈನಲ್‌ನಲ್ಲಿ ಶತಕ ಬಾರಿಸಿ ಮಿಂಚಿದ ಶೆಲ್ಡನ್‌ ಜಾಕ್ಸನ್‌ (14) ಅವರನ್ನು ಪೊರೆಲ್‌ ಬೇಗನೇ ಔಟ್‌ ಮಾಡಿ ಬಂಗಾಲಕ್ಕೆ ಮೇಲುಗೈ ಒದಗಿಸಿದರು.

94 ಎಸೆತಗಳಿಂದ 29 ರನ್‌ ಮಾಡಿರುವ ಅರ್ಪಿತ್‌ ವಸವಾಡ ಕ್ರೀಸ್‌ನಲ್ಲಿದ್ದಾರೆ.
ಸಂಕ್ಷಿಪ್ತ ಸ್ಕೋರ್‌: ಸೌರಾಷ್ಟ್ರ-5 ವಿಕೆಟಿಗೆ 206 (ಬರೋಟ್‌ 54, ವಿ. ಜಡೇಜ 54, ಹಾರ್ವಿಕ್‌ 38, ವಸವಾಡ ಬ್ಯಾಟಿಂಗ್‌ 29, ಜಾಕ್ಸನ್‌ 14, ಆಕಾಶ್‌ ದೀಪ್‌ 41ಕ್ಕೆ 3).

ಟಾಪ್ ನ್ಯೂಸ್

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

Ranji Trophy: ಕರ್ನಾಟಕ ಬಿಗಿ ಹಿಡಿತ; ಕೆ. ಶ್ರೀಜಿತ್‌ ಶತಕ

Ranji Trophy: ಕರ್ನಾಟಕ ಬಿಗಿ ಹಿಡಿತ; ಕೆ. ಶ್ರೀಜಿತ್‌ ಶತಕ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತಕ್ಕೆ 13-0 ಗೋಲು ಜಯ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತಕ್ಕೆ 13-0 ಗೋಲು ಜಯ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.