ರಣಜಿ: ಸರ್ವೀಸಸ್ ವಿರುದ್ಧ ವಿಫಲವಾದ ಕರ್ನಾಟಕ ಬ್ಯಾಟಿಂಗ್
Team Udayavani, Dec 13, 2022, 10:52 PM IST
ಬೆಂಗಳೂರು: ನಗರದ ಚಿನ್ನಸ್ವಾಮಿ ಮೈದಾನದಲ್ಲಿ 99ನೇ ರಣಜಿ ಪಂದ್ಯ ಆರಂಭವಾಗಿದೆ.
ಮಾಯಾಂಕ್ ಅಗರ್ವಾಲ್ ನೇತೃತ್ವದ ಕರ್ನಾಟಕ ತಂಡ, ಸರ್ವೀಸಸ್ ತಂಡವನ್ನು ತನ್ನ ರಣಜಿ ಇತಿಹಾಸದಲ್ಲೇ ಮೊದಲ ಬಾರಿ ಎದುರಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜ್ಯ ಒಟ್ಟು 40 ಓವರ್‌ಗಳನ್ನು ಎದುರಿಸಿ 6 ವಿಕೆಟ್‌ಗಳನ್ನು ಕಳೆದುಕೊಂಡು 148 ರನ್‌ಗಳನ್ನು ಗಳಿಸಿತು. ಮಂದಬೆಳಕು, ಮಳೆಯ ಕಾರಣದಿಂದ ದಿನದಾಟ ಪೂರ್ಣವಾಗಿ ನಡೆಯಲಿಲ್ಲ.
ಕರ್ನಾಟಕದ ನಾಯಕ ಮಾಯಾಂಕ್ ಅಗರ್ವಾಲ್ ಇದೇ ಮೊದಲ ಬಾರಿಗೆ ನಾಯಕತ್ವ ವಹಿಸಿದರು. ಇಲ್ಲವರಿಗೆ ವೈಫಲ್ಯವೇ ಎದುರಾಯಿತು. ಆರ್.ಸಮರ್ಥ್ರಂತೆಯೇ ಕೇವಲ 8 ರನ್‌ಗಳಿಗೆ ಹೊರ ನಡೆದರು. ರಾಜ್ಯವನ್ನು ಆಧರಿಸಿದ್ದು ಹೊಸಬ ವಿಶಾಲ್ ಒನತ್. ಅವರು 79 ಎಸೆತಗಳಲ್ಲಿ 33 ರನ್ ಗಳಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ನಿಕಿನ್ ಜೋಸ್ ಅತ್ಯುತ್ತಮ ನಿರ್ವಹಣೆ ತೋರಿದರು. ಅವರು 83 ಎಸೆತಗಳಲ್ಲಿ 62 ರನ್ ಗಳಿಸಿದರು. ಈ ಇಬ್ಬರು ಕೈಹಿಡಿಯದಿದ್ದರೆ ರಾಜ್ಯ ಆಲೌಟ್‌ಗೆ ಸಮೀಪವಾಗುವ ಸಾಧ್ಯತೆಯಿತ್ತು. ಸರ್ವೀಸಸ್ ತಂಡದ ಪರ ವೇಗಿ ದಿವೇಶ್ ಪಠಾಣಿಯ ಅತ್ಯುತ್ತಮ ಬೌಲಿಂಗ್ ಮಾಡಿ 40 ರನ್ ನೀಡಿ 5 ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್: ಕರ್ನಾಟಕ 148/6 (ನಿಕಿನ್ ಜೋಸ್ 62, ವಿಶಾಲ್ ಒನತ್ 33, ದಿವೇಶ್ ಪಠಾಣಿಯ 40ಕ್ಕೆ 5)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.