ಮುಂಬಯಿಗೆ ಇನ್ನಿಂಗ್ಸ್ ಜಯ
Team Udayavani, Dec 22, 2022, 9:43 PM IST
ಮುಂಬಯಿ: ಹೈದರಾಬಾದ್ ತಂಡದೆದುರಿನ ರಣಜಿ ಪಂದ್ಯದಲ್ಲಿ ಮುಂಬಯಿ ತಂಡವು ಇನ್ನಿಂಗ್ಸ್ ಮತ್ತು 217 ರನ್ನುಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನಿಂದ ಮುಂಬಯಿ “ಬಿ’ ಬಣದಲ್ಲಿ ಆಡಿದ ಎರಡು ಪಂದ್ಯಗಳಲ್ಲಿ ಜಯಭೇರಿ ಬಾರಿಸಿ ಒಟ್ಟು 13 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.
ಮುಂಬಯಿಯ ಬೃಹತ್ ಮೊತ್ತ ನೋಡಿಯೇ ಹೆದರಿದ್ದ ಹೈದರಾಬಾದ್ ತಂಡವು ಆರು ವಿಕೆಟಿಗೆ 173 ರನ್ನುಗಳಿಂದ ಮೂರನೇ ದಿನದಾಟ ಆರಂಭಿಸಿ 214 ರನ್ನಿಗೆ ಆಲೌಟಾಯಿತು. ಮೊದಲ ಇನ್ನಿಂಗ್ಸ್ನಲ್ಲಿ 437 ರನ್ ಹಿನ್ನಡೆ ಪಡೆದ ಕಾರಣ ಹೈದರಾಬಾದ್ ತಂಡ ಫಾಲೋಆನ್ ಪಡೆಯಿತು. ಶಮ್ಸ್ ಮುಲಾನಿ ಮತ್ತು ತನುಷ್ ಕೋಟ್ಯಾನ್ ಅವರ ಬಿಗು ದಾಳಿಗೆ ದ್ವಿತೀಯ ಇನ್ನಿಂಗ್ಸ್ನಲ್ಲೂ ನೆಲಕಚ್ಚಿದ ಹೈದರಾಬಾದ್ ಕೇವಲ 220 ರನ್ನಿಗೆ ಆಲೌಟಾಗಿ ಸೋಲನ್ನು ಒಪ್ಪಿಕೊಂಡಿತು.
ಮೊದಲ ಇನ್ನಿಂಗ್ಸ್ನಲ್ಲಿ 94 ರನ್ನಿಗೆ 7 ವಿಕೆಟ್ ಕಿತ್ತು ಹೈದರಾಬಾದ್ನ ಕುಸಿತಕ್ಕೆ ಕಾರಣರಾದ ಮುಲಾನಿ ದ್ವಿತೀಯ ಇನ್ನಿಂಗ್ಸ್ನಲ್ಲಿ ಮತ್ತೆ 82 ರನ್ನಿಗೆ 4 ವಿಕೆಟ್ ಕಿತ್ತು ಗಮನ ಸೆಳೆದರು. ತನುಷ್ ಕೋಟ್ಯಾನ್ 82 ರನ್ನಿಗೆ 5 ವಿಕೆಟ್ ಹಾರಿಸಿದರು. ಇವರಿಬ್ಬರು ಸೇರಿ ಹೈದರಾಬಾದ್ಗೆ ಪ್ರಬಲ ಹೊಡೆತವಿಕ್ಕಿದರು.
ಸಂಕ್ಷಿಪ್ತ ಸ್ಕೋರು: ಮುಂಬಯಿ 6 ವಿಕೆಟಿಗೆ 651 ಡಿಕ್ಲೇರ್; ಹೈದರಾಬಾದ್ 214 ಮತ್ತು 220 (ರಾಹುಲ್ ಬುದ್ಧಿ 65, ತನ್ಮಯ್ ಅಗರ್ವಾಲ್ 39, ತನಯ್ ತ್ಯಾಗರಾಜನ್ 39 ಔಟಾಗದೆ, ಮುಲಾನಿ 82ಕ್ಕೆ 4, ತನುಷ್ ಕೋಟ್ಯಾನ್ 82ಕ್ಕೆ 5).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!
Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.