ODI World Cup 2023 ನಲ್ಲಿ ಅಶ್ವಿನ್ ಆಡುತ್ತಾರಾ..?: ಮೌನ ಮುರಿದ ಸ್ಪಿನ್ನರ್
Team Udayavani, Aug 17, 2023, 3:46 PM IST
ಮುಂಬೈ: 2022 ರ ಟಿ 20 ವಿಶ್ವಕಪ್ ಗೆ ನಾಟಕೀಯವಾಗಿ ಮರಳಿದ ರವಿಚಂದ್ರನ್ ಅಶ್ವಿನ್ ಇದೀಗ ಏಕದಿನ ವಿಶ್ವಕಪ್ ಗೆ ಆಯ್ಕೆಯಾಗುವ ಬಗ್ಗೆ ಖಚಿತವಾಗಿಲ್ಲ. 2022ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಭಾರತದ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಅಶ್ವಿನ್, ಏಕದಿನ ವಿಶ್ವಕಪ್ ನಲ್ಲಿ ಸ್ಥಾನ ಪಡೆಯುವ ಬಗ್ಗೆ ಅನುಮಾನಗಳಿವೆ.
ಈ ಬಗ್ಗೆ ಸ್ವತಃ ಮಾತನಾಡಿರುವ ಅಶ್ವಿನ್, ಅಂತಹ ಆಲೋಚನೆಗಳಿಗೆ ಮನಸ್ಸಿನಲ್ಲಿ ಯಾವುದೇ ಸ್ಥಳವನ್ನು ನೀಡದಿರಲು ತಾನು ಬಹಳ ಹಿಂದೆಯೇ ನಿರ್ಧರಿಸಿದ್ದೇನೆ ಎಂದು ಹೇಳಿದರು.
ಏಕದಿನ ವಿಶ್ವಕಪ್ ಆಯ್ಕೆಗೆ ಪರಿಗಣಿಸದಿರುವುದು ನಿಮ್ಮ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ಕೇಳಿದಾಗ ಅಶ್ವಿನ್, “ನಾನು ಹಾಗೆ ಯೋಚಿಸುವುದಿಲ್ಲ, ಏಕೆಂದರೆ ತಂಡದ ಆಯ್ಕೆ ನನ್ನ ಕೆಲಸವಲ್ಲ”ಎಂದಿದ್ದಾರೆ.
“ನನ್ನ ಕೈಯಲ್ಲಿಲ್ಲದ ವಿಷಯಗಳ ಬಗ್ಗೆ ನಾನು ಯೋಚಿಸುವುದಿಲ್ಲ ಎಂದು ನಾನು ಬಹಳ ಹಿಂದೆಯೇ ನಿರ್ಧರಿಸಿದ್ದೆ. ನಾನು ಜೀವನ ಮತ್ತು ನನ್ನ ಕ್ರಿಕೆಟ್ ವಿಷಯದಲ್ಲಿ ಪ್ರಾಮಾಣಿಕವಾಗಿ ಉತ್ತಮ ಜಾಗದಲ್ಲಿದ್ದೇನೆ. ನನ್ನ ಆಲೋಚನೆ ಪ್ರಕ್ರಿಯೆಯಿಂದ ನಕಾರಾತ್ಮಕತೆಯನ್ನು ದೂರವಿರಿಸಲು ಪ್ರಯತ್ನಿಸುತ್ತೇನೆ” ಎಂದು ಅಶ್ವಿನ್ ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
“ನಾನು ಈ ದಿನದಲ್ಲಿ ಬದುಕುತ್ತೇನೆ. ಆದರೆ ನಾನು ಆಡದಿದ್ದರೂ ಭಾರತ ಮತ್ತೆ ವಿಶ್ವಕಪ್ ಗೆಲ್ಲುವುದನ್ನು ನೋಡಲು ನಾನು ಇಷ್ಟಪಡುತ್ತೇನೆ” ಎಂದು ಸ್ಪಿನ್ನರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.