ನಾರ್ಕೋ ಪರೀಕ್ಷೆಗೆ ಒಳಗಾಗಲು ಸಿದ್ಧ, ಆದರೆ..: Wrestlerಗಳಿಗೆ ಬ್ರಿಜ್ ಭೂಷಣ್ ಸಿಂಗ್ ಸವಾಲು
Team Udayavani, May 22, 2023, 8:56 AM IST
ಹೊಸದಿಲ್ಲಿ: ಕುಸ್ತಿಪಟುಗಳ ಒಂದು ವಿಭಾಗದಿಂದ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ನಾರ್ಕೋ ಪರೀಕ್ಷೆಗೆ ಒಳಗಾಗಲು ಸಿದ್ಧ ಎಂದು ಹೇಳಿದ್ದಾರೆ. ಆದರೆ ಒಂದು ಷರತ್ತನ್ನೂ ವಿಧಿಸಿದ್ದಾರೆ.
ಫೇಸ್ ಬುಕ್ ಪೋಸ್ಟ್ ಹಾಕಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್, “ನಾನು ನಾರ್ಕೋ ಪರೀಕ್ಷೆ, ಪಾಲಿಗ್ರಾಫ್ ಪರೀಕ್ಷೆ ಅಥವಾ ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾಗಲು ಸಿದ್ಧನಿದ್ದೇನೆ, ಆದರೆ ನನ್ನ ಷರತ್ತು ಎಂದರೆ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಕೂಡ ಅವುಗಳನ್ನು ಮಾಡಬೇಕು. ನನ್ನೊಂದಿಗೆ, ಇಬ್ಬರೂ ಕುಸ್ತಿಪಟುಗಳು ಅದನ್ನು ಒಪ್ಪಿದರೆ, ಪತ್ರಿಕಾಗೋಷ್ಠಿ ಕರೆದು ಘೋಷಣೆ ಮಾಡಿ, ನಾನು ಪರೀಕ್ಷೆಗೆ ಸಿದ್ಧನಿದ್ದೇನೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ” ಎಂದಿದ್ದಾರೆ.
ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭಾನುವಾರ ಸಾರ್ವಜನಿಕ ಸಭೆ ನಡೆಸಿದ ಅವರು, ಪ್ರತಿಭಟನಾ ನಿರತ ಕುಸ್ತಿಪಟುಗಳು ರಾಜಕೀಯದ ಆಟಿಕೆಗಳಾಗಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ:Royal Challengers Bangalore:ಒಂದೇ ಮಾತಿನಲ್ಲಿ ಟೀಕಾಕಾರರ ಬಾಯಿ ಮುಚ್ಚಿಸಿದ ಕಿಂಗ್ ಕೊಹ್ಲಿ
ಸಭೆಯಲ್ಲಿ ಮಾತನಾಡಿದ ಬ್ರಿಜ್ ಭೂಷಣ್ ಶರಣ್ ಸಿಂಗ್, ‘ಯಾರ ಯಶಸ್ಸಿಗಾಗಿ ನಾನು ಎಲ್ಲವನ್ನೂ ತ್ಯಾಗ ಮಾಡಿದೆನೋ, ಅದೇ ಮಕ್ಕಳು ಇಂದು ರಾಜಕೀಯದ ಆಟಿಕೆಗಳಾಗಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ’ ಎಂದರು.
ನಾಲ್ಕು ತಿಂಗಳ ನಂತರವೂ ಕುಸ್ತಿಪಟುಗಳು ತಮ್ಮ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಆಡಿಯೋ, ವಿಡಿಯೋ ಅಥವಾ ಇತರ ಯಾವುದೇ ರೆಕಾರ್ಡಿಂಗ್ ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.
ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಏಪ್ರಿಲ್ 23 ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.