ಬಿಸಿಸಿಐ ಮೇಲೆ ಸುಪ್ರೀಂ ಆದೇಶ ಹೇರಲು ಸಿದ್ಧ
Team Udayavani, Jul 2, 2017, 3:45 AM IST
ಮುಂಬೈ: ಸರ್ವೋಚ್ಚ ನ್ಯಾಯಾಲಯದ ಆಡಳಿತಾತ್ಮಕ ಸುಧಾರಣೆ ಆದೇಶವನ್ನು ಜಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ಬಿಸಿಸಿಐ ವಿಳಂಬ ತಂತ್ರ ಅನುಸರಿಸುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನ್ಯಾಯಪೀಠ ನಿಯೋಜಿತ ಬಿಸಿಸಿಐ ಆಡಳಿತಾಧಿಕಾರಿ ವಿನೋದ್ ರಾಯ್, ಬಿಸಿಸಿಐ ವಿಶೇಷ ಸಭೆಯಲ್ಲಿ ಯಾವುದೇ ನಿರ್ಧಾರವಾಗಿರಬಹುದು. ಆದರೆ ಆಡಳಿತಾಧಿಕಾರಿಗಳಿಗೆ ನ್ಯಾಯಾಲಯದ ಆದೇಶವನ್ನು ಜಾರಿ ಮಾಡಲು ಪೂರ್ಣ ಅಧಿಕಾರವಿದೆ. ನಾವು ಆದೇಶವನ್ನು ಜಾರಿ ಮಾಡಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಬಿಸಿಸಿಐ ತನ್ನ ವಿಶೇಷ ಸಭೆ ನಡೆಸಿ, ನ್ಯಾಯಪೀಠದ ಆದೇಶವನ್ನು ಪುನಃ ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿತ್ತು. ಇದು ನ್ಯಾಯಾಲಯದ ಆದೇಶದ ಜಾರಿಯನ್ನು ವಿಳಂಬಗೊಳಿಸಲು ಬಿಸಿಸಿಐ ಮಾಡಿದ ತಂತ್ರ ಎಂದು ವರ್ಣಿಸಲಾಗಿದೆ. ಇದೇ ಹಿನ್ನೆಲೆಯಲ್ಲಿ ವಿನೋದ್ ರಾಯ್ ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಎಲ್ಲರ ಮನವೊಲಿಸಲು ಪ್ರಯತ್ನಿಸುತ್ತಿದ್ದೇವೆ. ಎಲ್ಲರ ಒಪ್ಪಿಗೆಯೊಂದಿಗೆ ಮುಂದುವರಿಯುವುದು ನಮ್ಮ ಉದ್ದೇಶ.
ಒಂದು ವೇಳೆ ಇದು ಸಾಧ್ಯವಾಗದಿದ್ದರೆ ನಾವು ಆದೇಶವನ್ನು ಒತ್ತಾಯಪೂರ್ವಕವಾಗಿ ಜಾರಿ ಮಾಡಬೇಕಾಗುತ್ತದೆ. ಇದು ಬಹಳ ಸರಳ ಸಂಗತಿ ಎಂದು ರಾಯ್ ಸ್ಪಷ್ಟಪಡಿಸಿದ್ದಾರೆ.
ಜು.14ರಂದು ಈ ಸಂಬಂಧ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಇದೇ ವೇಳೆ ತನ್ನ ವಿರೋಧವನ್ನು ಸೂಚಿಸಲು ಬಿಸಿಸಿಐ ಕೂಡ 7 ಮಂದಿಯ ಸಮಿತಿ ರಚಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿನೋದ್ ರಾಯ್, ಬಿಸಿಸಿಐ ವಾರ್ಷಿಕ ಸರ್ವ ಸದಸ್ಯರ ಸಭೆ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ. ಅ.31ರೊಳಗೆ ಚುನಾವಣೆ ನಡೆದು ಹೊಸ ಪದಾಧಿಕಾರಿಗಳು ಆಯ್ಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಆದೇಶ ಜಾರಿಯಾಗದಿರುವುದು
ದುರದೃಷ್ಟಕರ: ಲೋಧಾ
ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಬಿಸಿಸಿಐ ಇನ್ನೂ ಜಾರಿ ಮಾಡದಿರುವ ಕುರಿತು ನ್ಯಾ.ಲೋಧಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತೀರ್ಪು ಜಾರಿಯಾಗಿ ವರ್ಷವಾಗುತ್ತಿದೆ. ಆಡಳಿತಾಧಿಕಾರಿಗಳ ಸಮಿತಿ ರಚನೆಯಾಗಿ 6 ತಿಂಗಳಾಗಿದೆ. ಆದರೂ ಆದೇಶ ಜಾರಿಯಾಗದಿರುವುದು ದುರದೃಷ್ಟಕರ ಎಂದು ಲೋಧಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.