ಐಪಿಎಲ್ಗೆ ಅನುದಾನ ಬಿಡುಗಡೆ ಮಾಡಿ: ಬಿಸಿಸಿಐಗೆ ಸುಪ್ರೀಂ ಸೂಚನೆ
Team Udayavani, Mar 25, 2017, 10:32 AM IST
ಹೊಸದಿಲ್ಲಿ: ಮುಂಬರುವ ಐಪಿಎಲ್ ಕೂಟ ವನ್ನು ಗಮನದಲ್ಲಿಟ್ಟುಕೊಂಡು ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ)ಗೆಶುಕ್ರವಾರ ಖಡಕ್ ಸೂಚನೆ ನೀಡಿದೆ.
ಹೊಸದಾಗಿ ಆಡಳಿತಕ್ಕೆ ಬಂದಿರುವ ವಿನೋದ್ ರಾಯ್ ಅವರನ್ನು ಒಳಗೊಂಡ ಆಡಳಿತ ಸಮಿತಿ ಇದುವರೆಗೆ ಬಾಕಿ ಅನುದಾನವನ್ನು ವಿವಿಧ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಬಿಡುಗಡೆ ಮಾಡಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಕ್ರಿಕೆಟ್ ಸಂಸ್ಥೆಗಳು ಈ ಹಿಂದೆಯೇ ತಮ್ಮ ಬಹಿರಂಗ ಅಸಮಾಧಾನವನ್ನು ಹೊರಹಾಕಿದ್ದವು. ಇದೀಗ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕೂಡ ಅಸಮಾಧಾನ ಹೊರಹಾಕಿದೆ. ಅಲ್ಲದೆ ಕೋರ್ಟ ಮೆಟ್ಟಿಲೇರಿದೆ. ದೂರಿನಲ್ಲಿ 4ನೇ ಟೆಸ್ಟ್ ಪಂದ್ಯದ ಆತಿಥ್ಯಕ್ಕೆ ಸಂಬಂಧಪಟ್ಟಂತೆ ಬಿಸಿಸಿಐ ರಾಜ್ಯ ಸಂಸ್ಥೆಗೆ ಹಣ ನೀಡಿಲ್ಲ ಎಂದು ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ದೂರಿತ್ತು. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಕೂಡಲೇ ಟೆಸ್ಟ್ ನಡೆಸಲು ನೀಡಬೇಕಿದ್ದ ಹಣವನ್ನು ನೀಡಿ. ಅಲ್ಲದೆ ಮುಂದಿನ ಐಪಿಎಲ್ ಕೂಟಗಳನ್ನು ಯಾವುದೇ ಅಡಚಣೆಗಳಿಲ್ಲದೆ ನಡೆಸಿಕೊಂಡು ಹೋಗಬೇಕು. ಇದಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಕಿವೀಸ್ ಸರ್ಜನ್ ಭೇಟಿಯಾದ ಬುಮ್ರಾ: ಚಾಂಪಿಯನ್ಸ್ ಟ್ರೋಫಿಗೆ ಅನುಮಾನ?
SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.