ಮರಳಿದ ಆನ್ರಿಚ್ ನೋರ್ಜೆ: ಡೆಲ್ಲಿ ಕ್ಯಾಪಿಟಲ್ಸ್ ನಿರಾಳ
Team Udayavani, Apr 5, 2022, 11:00 PM IST
ಮುಂಬೈ: ಪ್ರಮುಖ ಆಟಗಾರ ಆನ್ರಿಚ್ ನೋರ್ಜೆ ಅವರು ನೆಟ್‌ನಲ್ಲಿ ಅಭ್ಯಾಸಕ್ಕೆ ಮರಳಿದ್ದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರು ಮತ್ತು ಅಭಿಮಾನಿಗಳು ಸಂಭ್ರಮಪಟ್ಟಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏ.7ರಂದು ನಡೆಯುವ ಪಂದ್ಯದಲ್ಲಿ ನೋರ್ಜೆ ಮತ್ತು ಡೇವಿಡ್ ವಾರ್ನರ್ ತಂಡಕ್ಕೆ ಮರಳುವ ಸಾಧ್ಯತೆಯಿದೆ ಎಂದು ಡೆಲ್ಲಿ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದಾರೆ.
ನೋರ್ಜೆ ಅವರು 2020ರ ಋತುವಿನಿಂದ ಡೆಲ್ಲಿ ತಂಡದ ಪರ ಆಡುತ್ತಿದ್ದಾರೆ. ಅವರನ್ನು ತಂಡ 50 ಲಕ್ಷ ರೂ.ಗಳಿಗೆ ಖರೀದಿಸಿತ್ತು. ಐಪಿಎಲ್ ಇತಿಹಾಸದ ಅತೀ ವೇಗದ ಬೌಲಿಂಗ್ ದಾಳಿ ಸಂಘಟಿಸಿದ ದಾಖಲೆ ಅವರ ಹೆಸರಲ್ಲಿದೆ. ಮಾತ್ರವಲ್ಲದೇ 2020ರ ವರ್ಷದ ಅಗ್ರ ಐದು ವೇಗದ ಎಸೆತಗಳನ್ನು ಅವರೊಬ್ಬರೇ ಎಸೆದಿದ್ದರು.
ಇದನ್ನೂ ಓದಿ:ಕಿರಿಯರ ಮಹಿಳಾ ಹಾಕಿ ವಿಶ್ವಕಪ್: ಭಾರತಕ್ಕೆ ಜಯ
ಈ ಋತುವಿನ ಆರಂಭದಲ್ಲಿ ಗಾಯದ ಸಮಸ್ಯೆಯಿಂದಾಗಿ ನೋರ್ಜೆ ಆಡುವುದು ಅನುಮಾನವೆಂದು ಹೇಳಲಾಗಿತ್ತು. ಆದರೆ ಇದೀಗ ಡೆಲ್ಲಿ ತಂಡವು ಟ್ವಿಟರ್‌ನಲ್ಲಿ ನೋರ್ಜೆ ಅವರು ಅಭ್ಯಾಸ ನಡೆಸುತ್ತಿರುವ ಚಿತ್ರ ಹಾಕಿರುವುದು ಮತ್ತು ಪಾಂಟಿಂಗ್ ಅವರ ಹೇಳಿಕೆಯಿಂದ ಅವರು ಆಡುವ ಸಾಧ್ಯತೆ ಹೆಚ್ಚಾಗಿದೆ.
ಡೆಲ್ಲಿ ಇಷ್ಟರವರೆಗೆ ಎರಡು ಪಂದ್ಯಗಳನ್ನು ಆಡಿದ್ದು ಒಂದರಲ್ಲಿ ಗೆದ್ದಿದೆ ಮತ್ತು ಇನ್ನೊಂದರಲ್ಲಿ ಸೋತಿದೆ. ಇದರೆ ಇದೀಗ ನೋರ್ಜೆ, ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಅವರನ್ನು ತಂಡವನ್ನು ಸೇರಿಕೊಳ್ಳುವುದರಿಂದ ಡೆಲ್ಲಿ ತಂಡ ಬಲಿಷ್ಠಗೊಳ್ಳುವುದು ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Team India: ಇಂಗ್ಲೆಂಡ್ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್ ಗೆ ನಾಯಕತ್ವದ ಹೊಣೆ
Vijay Hazare : ವರುಣ್, ತಿಲಕ್ ಬ್ಯಾಟಿಂಗ್ ವೈಭವ; ಹೈದರಾಬಾದ್ ವಿರುದ್ದ ಸೋತ ಕರ್ನಾಟಕ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
Blitz Chess: ಜೀನ್ಸ್ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್ ಆಡಲು ಕಾರ್ಲ್ಸನ್ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.