Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Team Udayavani, Nov 16, 2024, 8:54 AM IST
ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ಹೌದು ರೋಹಿತ್ ಶರ್ಮಾ ಪತ್ನಿ ರಿತಿಕಾ ಶುಕ್ರವಾರ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈಗಾಗಲೇ ರೋಹಿತ್ ದಂಪತಿಗೆ 6 ವರ್ಷದ ಮಗಳಿದ್ದು ಇದೀಗ ಮನೆಗೆ ಹೊಸ ಅತಿಥಿಯ ಆಗಮನದಿಂದ ಮನೆಯಲ್ಲಿ ಸಂತಸ ಮನೆಮಾಡಿದೆ.
ಎರಡನೇ ಮಗುವಿಗೆ ತಂದೆಯಾಗುವ ಉದ್ದೇಶದಿಂದಲೇ ನವೆಂಬರ್ 22 ರಿಂದ ಆರಂಭವಾಗುವ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಆಡುವುದು ಅನುಮಾನ ಎನ್ನಲಾಗಿತ್ತು ಇದರ ಬೆನ್ನಲ್ಲೇ ರೋಹಿತ್ ಎರಡನೇ ಮಗುವಿಗೆ ತಂದೆಯಾಗುತ್ತಿರುವ ವಿಚಾರ ಬಹಿರಂಗಗೊಂಡಿದೆ ಎನ್ನಲಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಆಡುವುದು ಅನುಮಾನ:
ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡುವ ಬಗ್ಗೆ ಅನುಮಾನವಿದೆ. ರೋಹಿತ್ ಎರಡನೇ ಮಗುವಿನ ತಂದೆಯಾಗುತ್ತಿರುವ ಕಾರಣ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಹೋಗಿಲ್ಲ. ಮೊದಲ ಪಂದ್ಯದಲ್ಲಿ ಆಡಲು ಆಸ್ಟ್ರೇಲಿಯಾಕ್ಕೆ ಹೋಗುತ್ತಾರೆಯೇ ಅಥವಾ ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಲು ಬಯಸುತ್ತಾರೆಯೇ ಎಂಬುದು ಕುತೂಹಲಕಾರಿಯಾಗಿದೆ. ಆದರೆ, ಅವರು ಆರಂಭಿಕ ಟೆಸ್ಟ್‌ನಲ್ಲಿ ಆಡುತ್ತಾರೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಆಸ್ಟ್ರೇಲಿಯಕ್ಕೆ ತೆರಳುವ ಮುನ್ನ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ರೋಹಿತ್ ಮೊದಲ ಪಂದ್ಯಕ್ಕೆ ಲಭ್ಯವಿರುತ್ತಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ಹೇಳಿದ್ದರು. ಈ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ ಎಂದು ಗಂಭೀರ್ ಹೇಳಿದ್ದಾರೆ.
ರೋಹಿತ್ ಮುಂಬೈನಲ್ಲಿ ನೆಟ್ ಪ್ರಾಕ್ಟೀಸ್
ರೋಹಿತ್ ಆಸ್ಟ್ರೇಲಿಯಾಕ್ಕೆ ಹೋಗದಿದ್ದರೂ, ತಂಡದಿಂದ ದೂರವಿದ್ದರೂ, ಈ ಸರಣಿಗೆ ಸ್ವತಃ ತಯಾರಿ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ರೋಹಿತ್ ಶರ್ಮಾ ಮುಂಬೈನಲ್ಲಿ ನೆಟ್ ಪ್ರಾಕ್ಟೀಸ್ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ಇದನ್ನೂ ಓದಿ: Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್ ಆಫ್ ಸ್ಪಿನ್ನರ್ ಎಂಟ್ರಿ
Team India: ಹೊಸ ಕೋಚ್ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್ ನಲ್ಲಿ ಪೀಟರ್ಸನ್
Ranji Trophy: ಭಾರತ ಕ್ರಿಕೆಟ್ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?
ICC Champions Trophy: ಚಾಂಪಿಯನ್ಸ್ ಟ್ರೋಫಿ ಉದ್ಘಾಟನೆ: ಹಾಜರಿರುವರೇ ಭಾರತದ ನಾಯಕ?
Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್ ಫೈನಲ್‌ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.