ಗೆದ್ದು ಬಾ ಇಂಡಿಯಾ, ಬರೋಬ್ಬರಿ 2 ಸಾವಿರ ಕೋಟಿಗೂ ಅಧಿಕ ಬೆಟ್ಟಿಂಗ್!
Team Udayavani, Jun 17, 2017, 5:37 PM IST
ನವದೆಹಲಿ: ಭಾರತ ಬಾಂಗ್ಲಾದೇಶವನ್ನು 9 ವಿಕೆಟ್ ಗಳ ಅಂತರದಿಂದ ಮಣಿಸಿ ಫೈನಲ್ ಗೇರಿದ್ದು, ಭಾನುವಾರ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಟೀಂ ಇಂಡಿಯಾ ಎದುರಿಸಲು ಸಜ್ಜಾಗಿದೆ. ಮತ್ತೊಂದೆಡೆ ಭಾರತ, ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಬರೋಬ್ಬರಿ 2 ಸಾವಿರ ಕೋಟಿಗೂ ಅಧಿಕ ಬೆಟ್ಟಿಂಗ್ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಹೌದು ಇಂಗ್ಲೆಂಡ್ ನಲ್ಲಿ ಕಾನೂನುಬದ್ಧವಾಗಿರುವ ಬೆಟ್ಟಿಂಗ್ ಹಿನ್ನೆಲೆಯಲ್ಲಿ ಭಾನುವಾರದ ಭಾರತ ಪಾಕ್ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯಾಟಕ್ಕೆ 2 ಸಾವಿರ ಕೋಟಿಗೂ ಅಧಿಕ ಬೆಟ್ಟಿಂಗ್ ವಹಿವಾಟು ನಡೆದಿದೆ ಎಂದು ಅಖಿಲ ಭಾರತ ಗೇಮಿಂಗ್ ಫೆಡರೇಷನ್(ಎಐಜಿಎಫ್) ಅಂದಾಜಿಸಿರುವುದಾಗಿ ವರದಿ ವಿವರಿಸಿದೆ.
ಎಂದಿನಂತೆ ಭಾರತವೇ ಬುಕ್ಕಿಗಳ ಫೇವರೆಟ್ ತಂಡವಾಗಿದೆ. ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಗೆದ್ದರೆ ಭಾರತದಲ್ಲಿ 100 ರೂ.ಗೆ 147 ರೂಪಾಯಿ ಸಿಗಲಿದೆ. ಒಂದು ವೇಳೆ ಎದುರಾಳಿ ಪಾಕಿಸ್ತಾನ ತಂಡ ಗೆಲುವು ಸಾಧಿಸಿದರೆ ನೂರಕ್ಕೆ 300 ರೂಪಾಯಿ ನಿಗದಿಯಾಗಿದೆ ಎಂದು ತಿಳಿಸಿದೆ.
ಒಂದು ವರ್ಷದಲ್ಲಿ ಭಾರತ ತಂಡ ಆಡುವ ಒಟ್ಟು ಪಂದ್ಯಗಳ ಮೇಲೆ 2 ಲಕ್ಷ ಕೋಟಿ ರೂಪಾಯಿ ಬೆಟ್ಟಿಂಗ್ ನಡೆಯುತ್ತದೆ ಎಂದು ಎಐಜಿಎಫ್ ಸಿಇಓ ರೋಲ್ಯಾಂಡ್ ಲ್ಯಾಂಡರ್ಸ್ ಅಂದಾಜಿಸಿದ್ದಾರೆ. ಅಲ್ಲದೇ ಸುಮಾರು 10 ವರ್ಷಗಳ ಬಳಿಕ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ತಂಡ ಮುಖಾಮುಖಿಯಾಗುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚಿನ ಬೆಟ್ಟಿಂಗ್ ನಡೆಯಲಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್ಡಿಐಎ’ಗೆ ಬರೋದಿದ್ದರೆ ನಿತೀಶ್ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.