IPL; ರೋಹಿತ್‌ ಶರ್ಮಾಗಾಗಿ 50 ಕೋಟಿ ರೂ ಎತ್ತಿಟ್ಟ ಲಕ್ನೋ ಮಾಲಿಕ?; ಗೋಯೆಂಕಾ ಹೇಳಿದ್ದೇನು?

Team Udayavani, Aug 29, 2024, 1:04 PM IST

Rs 50 Crore Earmarked For Rohit Sharma By LSG? What did Goenka say?

ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನ (IPL) ಮೆಗಾ ಹರಾಜು (Mega Auction) ಈ ವರ್ಷದ ಅಂತ್ಯದಲ್ಲಿ ನಡೆಯಲಿದೆ. ಈ ವೇಳೆ ಎಲ್ಲಾ ತಂಡಗಳಲ್ಲಿ ಭಾರಿ ಬದಲಾವಣೆಗಳು ಆಗಲಿದೆ. ಪ್ರಮುಖ ಕೆಲವೇ ಆಟಗಾರರನ್ನು ಫ್ರಾಂಚೈಸಿಗಳು ತಮ್ಮಲ್ಲಿ ಇರಿಸಿಕೊಂಡು ಉಳಿದ ಆಟಗಾರರನ್ನು ಕೈಬಿಡಬೇಕಾಗುತ್ತದೆ. ಈ ಬಗ್ಗೆ ಈಗಾಗಲೇ ಹಲವು ಊಹಾಪೋಹ ಪ್ರೇರಿತ ಸುದ್ದಿಗಳು ಹರಿದಾಡುತ್ತಿದೆ.

ಬಹುತೇಕ ಎಲ್ಲಾ ಫ್ರಾಂಚೈಸಿಗಳು ಮುಂಬೈ ಇಂಡಿಯನ್ಸ್‌ ನ (Mumbai Indians) ರಿಟೆನ್ಶನ್‌ ಲಿಸ್ಟ್‌ ಮೇಲೆ ಕಣ್ಣಿಟ್ಟಿದೆ. ಮುಂಬೈ ತಂಡದಲ್ಲಿ ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್‌ ಯಾದವ್‌, ಟಿ20 ವಿಶ್ವಕಪ್‌ ಗೆದ್ದ ನಾಯಕ ರೋಹಿತ್‌ ಶರ್ಮಾ, ಮುಂಬೈ ನಾಯಕ ಹಾರ್ದಿಕ್‌ ಪಾಂಡ್ಯ, ವಿಶ್ವದ ಅತ್ಯುತ್ತಮ ಬೌಲರ್‌ ಗಳಲ್ಲಿ ಒಬ್ಬರಾದ ಜಸ್ಪ್ರೀತ್‌ ಬುಮ್ರಾ ಇದ್ದಾರೆ, ಇವರಲ್ಲಿ ಯಾರನ್ನೆಲ್ಲಾ ಮುಂಬೈ ಉಳಿಸಿಕೊಳ್ಳುತ್ತದೆ, ಯಾರನ್ನು ಬಿಡಲಿದೆ ಎಂಬ ಕುತೂಹಲ ಮೂಡಿದೆ.

ಇದರ ನಡುವೆ ಲಕ್ನೋ ಸೂಪರ್‌ ಜೈಂಟ್ಸ್‌ ಮಾಲಿಕ ಸಂಜೀವ್‌ ಗೋಯೆಂಕಾ (Sanjiv Goenka) ಅವರು ರೋಹಿತ್‌ ಶರ್ಮಾ (Rohit Sharma) ಅವರನ್ನು ಖರೀದಿಸಲೆಂದೇ 50 ಕೋಟಿ ರೂ ಪ್ರತ್ಯೇಕವಾಗಿರಿಸಿದ್ದಾರೆ ಎಂದು ಸುದ್ದಿಯೊಂದು ಹರಿದಾಡಿತ್ತು. ಇದೀಗ ಈ ವದಂತಿಗೆ ಗೋಯೆಂಕಾ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಪೋರ್ಟ್ಸ್‌ ತಕ್‌ ಗೆ ನೀಡಿದ ಸಂದರ್ಶನದ ವೇಳೆ ನಿರೂಪಕ ಈ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಗೋಯೆಂಕಾ, “ರೋಹಿತ್‌ ಶರ್ಮಾ ಹರಾಜಿಗೆ ಬರುತ್ತಾರೆ ಎಂದು ನಿಮಗೆ ಗೊತ್ತಾ? ಅಥವಾ ಯಾರಿಗಾದರೂ ಗೊತ್ತಾ? ಮುಂಬೈ ಇಂಡಿಯನ್ಸ್‌ ಅವರನ್ನು ರಿಲೀಸ್‌ ಮಾಡುತ್ತಾ? ರೋಹಿತ್‌ ಹರಾಜಿನ ಭಾಗವಾಗುತ್ತಾರಾ? ಒಂದು ವೇಳೆ ಅವರು ಹರಾಜಿಗೆ ಬಂದರೂ ಕೇವಲ ಒಬ್ಬ ಆಟಗಾರನಿಗೆ ನಿಮ್ಮ ಬಜೆಟ್‌ ನ ಶೇ.50ರಷ್ಟು ಬಳಸಲು ಸಾಧ್ಯವಿಲ್ಲ. ಹಾಗಾದರೆ ಉಳಿದ 22 ಆಟಗಾರರನ್ನು ತೆಗೆದುಕೊಳ್ಳುವುದು ಹೇಗೆ” ಎಂದರು.

ಹಾಗಾದರೆ ಅವರು ನೀವು ಖರೀದಿಸಲು ಬಯಸುವ ಆಟಗಾರರ ಪಟ್ಟಿಯಲ್ಲಿದ್ದಾರಾ ಎಂದು ಸಂದರ್ಶನಕಾರ ಕೇಳಿದರು.

“ಪ್ರತಿಯೊಬ್ಬರನ್ನು ಒಂದು ವಿಶ್‌ ಲಿಸ್ಟ್‌ ಇರುತ್ತದೆ. ಉತ್ತಮ ಆಟಗಾರ, ಉತ್ತಮ ನಾಯಕ ನಿಮ್ಮ ತಂಡದಲ್ಲಿ ಇರಬೇಕು ಎಂದು ನೀವು ಬಯಸುತ್ತೀರಿ. ಆದರೆ ಇದು ಕೇವಲ ಬಯಕೆಯ ವಿಚಾರವಲ್ಲ. ಯಾರೆಲ್ಲಾ ಲಭ್ಯರಿದ್ದಾರೆ, ಯಾರೆಲ್ಲಾ ನಿಮಗೆ ಸಿಕ್ಕರು ಅಷ್ಟೇ ವಿಚಾರ ಇರುವುದು. ನಾನು ಯಾರನ್ನೂ ಬಯಸಬಹುದು, ಆದರೆ ಎಲ್ಲಾ ಫ್ರಾಂಚೈಸಿಗಳಲ್ಲೂ ಇದೇ ರೀತಿ ನಡೆಯುತ್ತದೆ. ನೀವು ಬಯಸಿದ ಎಲ್ಲರೂ ನಿಮಗೆ ಸಿಗುವುದಿಲ್ಲ” ಎಂದು ಸಂಜೀವ್‌ ಗೋಯೆಂಕಾ ಹೇಳಿದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.