ಕ್ರಿಕೆಟ್ ಲೆಜೆಂಡ್ ಸಚಿನ್ ಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ
Team Udayavani, Jul 19, 2019, 9:49 AM IST
ಮುಂಬೈ: ವಿಶ್ವ ಕ್ರಿಕೆಟ್ ನ ದಂತಕಥೆ, ಭಾರತದ ಮಾಜಿ ಆಟಗಾರ ಸಚಿನ್ ತೆಂಡುಲ್ಕರ್ ಗೆ ಐಸಿಸಿ ಹೊಸತೊಂದು ಗೌರವ ನೀಡಿ ಪುರಸ್ಕರಿಸಿದೆ. ಲಿಟಲ್ ಮಾಸ್ಟರ್ ಗೆ ಐಸಿಸಿ ತನ್ನ ಅತ್ಯುನ್ನತ ʼ ಹಾಲ್ ಆಫ್ ಫೇಮ್ʼ ಗೌರವ ನೀಡಿದೆ.
46 ವರ್ಷದ ಸಚಿನ್ ತೆಂಡುಲ್ಕರ್ ಈ ಅತ್ಯನ್ನತ ಗೌರವ ಪಡೆದ ಆರನೇ ಭಾರತೀಯ. ಈ ಮೊದಲು ಸುನೀಲ್ ಗಾವಸ್ಕರ್, ಬಿಷನ್ ಸಿಂಗ್ ಬೇಡಿ, ಕಪಿಲ್ ದೇವ್, ಅನಿಲ್ ಕುಂಬ್ಳೆ, ಮತ್ತು ರಾಹುಲ್ ದ್ರಾವಿಡ್ ಈ ಗೌರವಕ್ಕೆ ಪಾತ್ರರಾಗಿದ್ದರು.
“ಈ ಸಂದರ್ಭದಲ್ಲಿ ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ನನ್ನ ಪಾಲಕರು, ಸಹೋದರ ಅಜಿತ್, ಪತ್ನಿ ಅಂಜಲಿ ನನ್ನ ಬದುಕಿನ ಆಧಾರ ಸ್ಥಂಭಗಳು. ರಮಾಕಾಂತ್ ಅಚ್ರೇಕರ್ ರಂತಹ ಕ್ರಿಕೆಟ್ ಕೋಚ್ ರನ್ನು ಪಡೆದಿದ್ದು ನನ್ನ ಅದೃಷ್ಟ” ಎಂದು ಸಚಿನ್ ಹೇಳಿಕೆ ನೀಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಸಿರುವ ಸಾಧನೆ ಮಾಡಿರುವ ಸಚಿನ್, ಟೆಸ್ಟ್ ಕ್ರಿಕೆಟ್ ನಲ್ಲಿ 15,921 ರನ್ ಮತ್ತು ಏಕದಿನ ಕ್ರಿಕೆಟ್ ನಲ್ಲಿ 18426 ರನ್ ಗಳಿಸಿದ್ದಾರೆ.
ಸಚಿನ್ ತೆಂಡುಲ್ಕರ್ ಜೊತೆಗೆ ದಕ್ಷಿಣ ಆಫ್ರಿಕ ಮಾಜಿ ಆಟಗಾರ ಅಲನ್ ಡೊನಾಲ್ಡ್ ಮತ್ತು ಮಾಜಿ ಆಸೀಸ್ ಆಟಗಾರ ಕ್ಯಾಥ್ರಿನ್ ಫಿಜ್ ಪ್ಯಾಟ್ರಿಕ್ ಅವರಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.