ಅನಾರೋಗ್ಯ: ಸ್ವಿಸ್ ಕೂಟದಿಂದ ಹೊರಬಂದ ಸೈನಾ ನೆಹ್ವಾಲ್
Team Udayavani, Mar 15, 2019, 12:30 AM IST
ಬಾಸೆಲ್: ತೀವ್ರ ಜಠರ ಸಂಬಂಧಿತ ನೋವಿನಿಂದ ಬಳಲುತ್ತಿದ್ದ ಸೈನಾ ನೆಹ್ವಾಲ್ ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಕೂಟದಿಂದ ಅರ್ಧದಿಂದಲೇ ಹೊರನಡೆದಿದ್ದಾರೆ. ಸೈನಾ ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಷಯ ಪ್ರಕಟಿಸಿದ್ದಾರೆ.
ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಕೂಟದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸೈನಾಗೆ ತುಂಬಾ ನೋವು ಕಂಡು ಬಂದಿದೆ. ಕೂಡಲೇ ಅವರನ್ನು ಸ್ವಿಸ್‌ನ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಜಠರ ನೋವಿನಿಂದ ಬಳಲುತ್ತಿರುವುದು ಕಂಡು ಬಂದಿದೆ. ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವಂತೆ ಸೈನಾಗೆ ವೈದ್ಯರು ಸೂಚಿಸಿದ್ದಾರೆ.
“ತುಂಬಾ ಬೇಸರವಾಗುತ್ತಿದೆ. ಹೊಟ್ಟೆನೋವಿನಿಂದಾಗಿ ಸ್ವಿಸ್ ಕೂಟವನ್ನು ಅರ್ಧದಲ್ಲೇ ಮೊಟಕುಗಳಿಸಿ ವಾಪಸ್ ಭಾರತಕ್ಕೆ ಬರುತ್ತಿದ್ದೇನೆ’ ಎಂದು ಸೈನಾ ತಿಳಿಸಿದ್ದಾರೆ.ಸೈನಾ ಎರಡು ವಾರಗಳ ಹಿಂದೆ ನಡೆದಿದ್ದ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಕೂಟದಲ್ಲಿ ಕ್ವಾರ್ಟರ್ ಫೈನಲ್ ತನಕ ಪ್ರವೇಶ ಪಡೆದಿದ್ದರು. ಆ ವೇಳೆಯೇ ಅವರಿಗೆ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಹೀಗಿದ್ದರೂ ಅವರು ಉತ್ತಮ ಆಟ ಪ್ರದರ್ಶಿಸಿದ್ದರು.
“ಆಲ್ ಇಂಗ್ಲೆಂಡ್ ಕೂಟದ 5 ಪಂದ್ಯಗಳನ್ನೂ ಈ ನೋವಿನಿಂದ ಹೇಗೋ ಮುಗಿಸಿದೆ. ಆದರೆ ಸ್ವಿಸ್ ಓಪನ್ ಕೂಟದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಜಠರದ ಊರಿಯೂತದ ಸಮಸ್ಯೆ ತೀವ್ರವಾಗಿದ್ದು, ವೈದ್ಯರು ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ. ಭಾರತಕ್ಕೆ ಮರಳಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುತ್ತೇನೆ’ ಎಂದು ಸೈನಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
BPL;ಅಂತಿಮ ಓವರಿನಲ್ಲಿ 30 ರನ್ ಸಿಡಿಸಿದ ನುರುಲ್
MUST WATCH
ಹೊಸ ಸೇರ್ಪಡೆ
Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.