ಥೈಲ್ಯಾಂಡ್ ಓಪನ್ ಟ್ರೋಫಿ ಗೆದ್ದ ಭಾರತದ ಸಾಯಿರಾಜ್ – ಚಿರಾಗ್ ಶೆಟ್ಟಿ
Team Udayavani, Aug 4, 2019, 3:19 PM IST
ಬ್ಯಾಂಕಾಕ್: ಭಾರತದ ಯುವ ಬ್ಯಾಡ್ಮಿಂಟನ್ ಜೋಡಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರೆಡ್ಡಿ ಇದೇ ಮೊದಲ ಬಾರಿಗೆ ಥೈಲ್ಯಾಂಡ್ ಓಪನ್ ಬ್ಯಾಡ್ಮಿಂಟನ್ ಕೂಟದ ಡಬಲ್ಸ್ ಟ್ರೋಫಿ ಗೆದ್ದು ಬೀಗಿದ್ದಾರೆ. ಈ ಸಾಧನೆ ಮಾಡಿದ ಭಾರತದ ಮೊದಲ ಜೋಡಿಯಾಗಿ ಸಾಯಿರಾಜ್ – ಚಿರಾಗ್ ಮೂಡಿ ಬಂದಿದ್ದಾರೆ.
ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ವಿಶ್ವದ ಮೂರನೇ ಶ್ರೇಯಾಂಕದ ಆಟಗಾರರಾದ ಚೀನಾದ ಲೀ ಜುನ್ ಹೂಯಿ ಮತ್ತು ಲಿಯು ಯು ಚೆನ್ ಅವರ ಸವಾಲನ್ನು ಸಮರ್ಥವಾಗಿ ಎದುರಿಸಿದರು. 21-19, 18-21, 21-18 ರ ಅಂತರದಿಂದ ಜಯ ಸಾಧಿಸಿದ ಭಾರತದ ಯುವ ಜೋಡಿ ಈ ಋತುವಲ್ಲಿ ಏರಿದ ಮೊದಲ ಫೈನಲ್ ನಲ್ಲೇ ಪ್ರಶಸ್ತಿಗೆ ಮುತ್ತಿಕ್ಕಿದರು.
ಆರಂಭದಿಂದಲೂ ಬಹಳಷ್ಟು ಜಿದ್ದಾಜಿದ್ದಿನಿಂದ ಸಾಗಿದ ಫೈನಲ್ ಪಂದ್ಯದಲ್ಲಿ ಮೊದಲ ಗೇಮ್ ಅನ್ನು ಭಾರತೀಯ ಜೋಡಿ 21-19 ಅಂತರದಲ್ಲಿ ವಶಪಡಿಸಿಕೊಂಡಿತು. ಆದರೆ ಮುಂದಿನ ಗೇಮ್ ನಲ್ಲಿ ತಿರುಗಿ ಬಿದ್ದ ಚೈನೀಸ್ ಜೋಡಿ 21-18 ಅಂತರದಲ್ಲಿ ವಶಪಡಿಸಿಕೊಂಡರು. ನಿರ್ಣಾಯಕ ಮೂರನೇ ಗೇಮ್ ನಲ್ಲಿ ಒಮ್ಮೆಯೂ ಎದುರಾಳಿಗೆ ಮುನ್ನಡೆ ಬಿಟ್ಟುಕೊಡದೆ ಆಡಿದ ಸಾಯಿರಾಜ್- ಚಿರಾಗ್ 21-18 ಅಂತರದಲ್ಲಿ ಗೆದ್ದು ಥಾಯ್ ಅಂಗಳದಲ್ಲಿ ಇತಿಹಾಸ ಬರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.