WFI ಚುನಾವಣೆ ಬೆನ್ನಲ್ಲೇ ಕುಸ್ತಿ ತೊರೆಯುವುದಾಗಿ ಹೇಳಿಕೆ ನೀಡಿದ ಸಾಕ್ಷಿ ಮಲಿಕ್…
Team Udayavani, Dec 22, 2023, 8:37 AM IST
ನವದೆಹಲಿ: ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿ ಕುಸ್ತಿಯನ್ನು ತೊರೆಯುವ ಹೇಳಿಕೆಯನ್ನು ನೀಡಿದ್ದಾರೆ.
ಗುರುವಾರ ನಡೆದ ಕುಸ್ತಿ ಫೆಡರೇಷನ್ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಗುರುವಾರ ನವದೆಹಲಿಯಲ್ಲಿ ನಡೆದ ಬಹುನಿರೀಕ್ಷಿತ WFI ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರು ಮಾಜಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೋರಾನ್ ಅವರನ್ನು ಸೋಲಿಸಿ ಕುಸ್ತಿ ಫೆಡರೇಷನ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತು ಮಾತನಾಡಿದ ಸಾಕ್ಷಿ ಮಲಿಕ್, ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಮತ್ತು ಆಪ್ತರಿಗೆ ಅವಕಾಶ ನೀಡುವುದಿಲ್ಲ ಎಂದು ಕ್ರೀಡಾ ಸಚಿವಾಲಯವು ಕುಸ್ತಿಪಟುಗಳಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಉತ್ತರ ಪ್ರದೇಶ ಕುಸ್ತಿ ಫೆಡರೇಶನ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಂಜಯ್ ಸಿಂಗ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬಲಗೈ ಬಂಟರಾಗಿದ್ದರು ಎಂದು ಎಲ್ಲರಿಗೂ ಗೊತ್ತಿರುವ ವಿಚಾರ ಹೀಗಿದ್ದರೂ ಅವರನ್ನು ಚುನಾವಣೆಗೆ ನಿಲ್ಲಿಸಿದೆ ಎಂದು ಆರೋಪಿಸಿದರು.
ಈ ಕಾರಣಕ್ಕೆ ನಾನು ಕುಸ್ತಿಯನ್ನು ತ್ಯಜಿಸುವುದಾಗಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತೆ ಬಜರಂಗ್ ಪುನಿಯಾ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾಕ್ಷಿ ಮಲಿಕ್ ಭಾವನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದಾರೆ.
#WATCH | Delhi: Wrestler Sakshi Malik breaks down as she says “…If Brij Bhushan Singh’s business partner and a close aide is elected as the president of WFI, I quit wrestling…” pic.twitter.com/26jEqgMYSd
— ANI (@ANI) December 21, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.