ವೆಬ್ ಸೀರಿಸ್‌ನಲ್ಲಿ ಸಾನಿಯಾ ಮಿರ್ಜಾ ನಟನೆ
Team Udayavani, Nov 19, 2020, 10:36 PM IST
ಹೊಸದಿಲ್ಲಿ: ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇದೀಗ ನಟನಾಕ್ಷೇತ್ರದತ್ತ ಮುಖ ಮಾಡಿದ್ದಾರೆ! ಹೌದು, ಕ್ಷಯ ರೋಗದ ವಿರುದ್ಧ ಜಾಗೃತಿ ಮೂಡಿಸುವ ವೆಬ್ ಸೀರಿಸ್ ಒಂದರಲ್ಲಿ ಸಾನಿಯಾ ನಟಿಸುತ್ತಿದ್ದು, ಆ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಿದ್ದಾರೆ.
ಸಾನಿಯಾ ಮಿರ್ಜಾ ನಟಿಸುತ್ತಿರುವ ವೆಬ್ ಸರಣಿಯ ಹೆಸರು “ಎಂಟಿವಿ ನಿಷೇಧ್ ಅಲೋನ್ ಟುಗೆದರ್’. ಇದು 5 ಕಂತುಗಳನ್ನು ಹೊಂದಿದ್ದು, ನವೆಂಬರ್ ಅಂತ್ಯದಲ್ಲಿ ಎಂಟಿವಿ ಇಂಡಿಯಾ ಮತ್ತು ಎಂಟಿವಿ ನಿಷೇಧ್ ಜಾಲತಾಣಗಳಲ್ಲಿ ಪ್ರಸಾರವಾಗಲಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಾನಿಯಾ ಮಿರ್ಜಾ, “ಕ್ಷಯ ರೋಗ ನಮ್ಮ ದೇಶದ ಅತ್ಯಂತ ದೀರ್ಘ ಕಾಲದ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ದೇಶದ ಒಟ್ಟು ಕ್ಷಯ ರೋಗಿಗಳಲ್ಲಿ 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಅರ್ಧದಷ್ಟಿದ್ದಾರೆ. ಇದನ್ನು ನಿಯಂತ್ರಿಸಲು ಹಾಗೂ ಈ ಬಗ್ಗೆ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.