Security Breach: ರೋಹಿತ್ ಶರ್ಮಾರನ್ನು ತಬ್ಬಿಕೊಂಡ ಅಭಿಮಾನಿ; ಮನಗೆದ್ದ ಇಂಡಿಯಾ ಕ್ಯಾಪ್ಟನ್
Team Udayavani, Jun 2, 2024, 8:29 AM IST
ನ್ಯೂಯಾರ್ಕ್: ಐಸಿಸಿ ಟಿ20 ವಿಶ್ವಕಪ್ ಗಾಗಿ ಅಮೆರಿಕ ತಲುಪಿರುವ ಟೀಂ ಇಂಡಿಯಾ ಶನಿವಾರ ಮೊದಲ ಅಭ್ಯಾಸ ಪಂದ್ಯವಾಡಿದೆ. ನ್ಯೂಯಾರ್ಕ್ ನ ನಸ್ಸೌ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭ ಜಯ ಗಳಿಸಿದೆ.
ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅರ್ಷ್‌ದೀಪ್ ಸಿಂಗ್, ಸೂರ್ಯಕುಮಾರ್ ಯಾದವ್ ಅವರಂತಹ ಆಟಗಾರರು ಬಾಂಗ್ಲಾ ವಿರುದ್ಧ 60 ರನ್‌ಗಳ ಜಯ ಗಳಿಸುವಲ್ಲಿ ಸಹಕಾರಿಯಾದರು. ಹೊಸದಾಗಿ ನಿರ್ಮಿಸಲಾದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭದ್ರತಾ ಉಲ್ಲಂಘನೆಗೆ ಸಾಕ್ಷಿಯಾಯಿತು.
ಭಾರತ ತಂಡ ಫೀಲ್ಡಿಂಗ್ ಮಾಡುತ್ತಿದ್ದ ಸಮಯದಲ್ಲಿ ಅಭಿಮಾನಿಯೊಬ್ಬ ನಾಯಕ ರೋಹಿತ್ ಶರ್ಮಾ ಅವರ ಬಳಿ ಬಂದ. ರೋಹಿತ್ ಅವರನ್ನು ಅಪ್ಪಿಕೊಂಡಿದ್ದ. ಕೂಡಲೇ ಓಡಿ ಬಂದ ಪೊಲೀಸರು ಆತನನ್ನು ಹಿಡಿದರು. ಆದರೆ ಎಳೆದುಕೊಂಡು ಹೋಗಬೇಡಿ ಎಂದು ರೋಹಿತ್ ಪೊಲೀಸರ ಬಳಿ ಕೇಳಿಕೊಂಡರು.
ಅಭ್ಯಾಸ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ರಿಷಭ್ ಪಂತ್ 53 ರನ್, ಹಾರ್ದಿಕ್ ಪಾಂಡ್ಯ 40 ರನ್, ಸೂರ್ಯಕುಮಾರ್ ಯಾದವ್ 31 ರನ್ ಗಳಿಸಿದರು.
The fan who breached the field and hugged Rohit Sharma was taken down by the USA police.
– Rohit requested the officers to go easy on them. pic.twitter.com/MWWCNeF3U2
— Mufaddal Vohra (@mufaddal_vohra) June 1, 2024
ಗುರಿ ಬೆನ್ನತ್ತಿದ ಬಾಂಗ್ಲಾ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 122 ರನ್ ಮಾತ್ರ ಗಳಿಸಿತು. ಅನುಭವಿ ಮೊಹಮದುಲ್ಲಾ ರಿಯಾದ್ 40 ಮಾಡಿದರೆ, ಶಕೀಬ್ ಅಲ್ ಹಸನ್ 28 ರನ್ ಗಳಿಸಿದರು. ಭಾರತದ ಪರ ಅರ್ಷದೀಪ್ ಮತ್ತು ಶಿವಂ ದುಬೆ ತಲಾ ಎರಡು ವಿಕೆಟ್ ಕಿತ್ತರು. ಬುಮ್ರಾ, ಸಿರಾಜ್, ಹಾರ್ದಿಕ್ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.