ವಿವಾದಕ್ಕೆ ಪ್ರತಿಕ್ರಿಯಿಸಲು ಸೆಹವಾಗ್ ನಕಾರ
Team Udayavani, Jul 19, 2017, 8:39 AM IST
ಮುಂಬಯಿ: ಭಾರತ ತಂಡದ ಮುಖ್ಯ ಕೋಚ್ ಆಯ್ಕೆಯ ವಿವಾದಕ್ಕೆ ಸಂಬಂಧಿಸಿದಂತೆ, ಕೋಚ್ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿದ್ದ ವೀರೇಂದ್ರ ಸೆಹವಾಗ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮಾಧ್ಯಮಗಳು ಪ್ರಶ್ನಿಸಿದಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿ ಮತ್ತು ಸೆಹವಾಗ್ ನಡುವೆ ತೀವ್ರ ಸ್ಪರ್ಧೆಯಿತ್ತು. ಉನ್ನತ ಸಲಹಾ ಸಮಿತಿಯಲ್ಲಿದ್ದ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ ಮತ್ತು ವಿ.ವಿ.ಎಸ್. ಲಕ್ಷ್ಮಣ್ ಅವರು ಸೆಹವಾಗ್ ಅವರನ್ನು 2 ಗಂಟೆಗೂ ಅಧಿಕ ಕಾಲ ಸಂದರ್ಶಿಸಿದ್ದರು. ಹೀಗಾಗಿ ಸೆಹವಾಗ್ ಆಯ್ಕೆ ಖಚಿತ ಎಂದೇ ಹೇಳಲಾಗಿತ್ತು.
ಆದರೆ ಅಂತಿಮವಾಗಿ ರವಿಶಾಸ್ತ್ರಿ ಆಯ್ಕೆ ಆಗುವಲ್ಲಿ ಯಶಸ್ವಿಯಾಗಿದ್ದರು. ಅನಂತರ ರವಿಶಾಸ್ತ್ರಿ ಆಯ್ಕೆಯ ಬಗ್ಗೆ ಹಲವರು ಟೀಕಿಸಿದ್ದರು. ಹೀಗಾಗಿ ಈ ಪ್ರಕರಣ ವಿವಾದವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ವೀರೇಂದ್ರ ಸೆಹವಾಗ್ ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.