ಸ್ವಯಂ ಪ್ರತ್ಯೇಕವಾಗಿರಲು ದಕ್ಷಿಣ ಆಫ್ರಿಕಾ ಕ್ರಿಕೆಟಿಗರು ನಿರ್ಧಾರ
Team Udayavani, Mar 19, 2020, 11:30 AM IST
ಜೋಹಾನ್ಸ್‌ಬರ್ಗ್: ಕ್ಷಿಪ್ರ ವೇಗದಲ್ಲಿ ಕೊರೊನಾ ವೈರಸ್ ಹಬ್ಬಿದ್ದರಿಂದ ದಕ್ಷಿಣ ಆಫ್ರಿಕಾ ತಂಡ ಭಾರತ ಆತಿಥ್ಯದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ತೆರಳಿದೆ.
ಈ ಬೆನ್ನಲ್ಲೇ ಸರಣಿಯಲ್ಲಿ ಪಾಲ್ಗೊಂಡ ಎಲ್ಲ ಆಟಗಾರರು, ಸಿಬ್ಬಂದಿ ಕೆಲವು ದಿನಗಳು ಸ್ವಯಂ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ. ವೈದ್ಯಕೀಯ ತಜ್ಞರ ಸೂಚನೆ ಮೇರೆಗೆ ಆಫ್ರಿಕಾ ತಂಡ ನಿರ್ಧಾರಕ್ಕೆ ಬಂದಿದೆ. ಈ ಬಗ್ಗೆ ಮಾತನಾಡಿದ ಡಾ. ಶುಯೈಬ್ ಮಂಜ್ರಾ, “ಕುಟುಂಬ, ಒಟ್ಟಾರೆ ಸಮಾಜದಿಂದ 14 ದಿನ ದೂರ ಇದ್ದು ಅಂತರ ಕಾಯ್ದುಕೊಳ್ಳುವಂತೆ ಆಟಗಾರರಿಗೆ ಶಿಫಾರಸು ಮಾಡಿದ್ದೇವೆ. ಈ ವೇಳೆ ಅನಾರೋಗ್ಯಕ್ಕೆ ತುತ್ತಾದರೆ ಅವರ ಬಗ್ಗೆ ನಿಗಾವಹಿಸಲಾಗುತ್ತದೆ. ಆರೋಗ್ಯ ಸ್ಥಿತಿ ಹತೋಟಿಗೆ ತರಲು ನಿಯಮಾವಳಿಯಂತೆ ಸೂಕ್ತ ಚಿಕಿತ್ಸೆ ನೀಡಬೇಕಾಗುತ್ತದೆ’ ಎಂದು ತಿಳಿಸಿದರು.
ದಕ್ಷಿಣ ಆಫ್ರಿಕಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಧರ್ಮಶಾಲಾದಿಂದ ಆರಂಭಿಸಿತ್ತು. ಮಳೆಯಿಂದಾಗಿ ಒಂದೂ ಎಸೆತ ಕಾಣದಂತೆ ಈ ಪಂದ್ಯ ರದ್ದಾಗಿತ್ತು. ಆ ಬಳಿಕ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರಿಂದ ಆಫ್ರಿಕಾ ಕ್ರಿಕೆಟಿಗರು ಕೂಟದಿಂದ ದಿಢೀರ್ ಹಿಂದಕ್ಕೆ ಸರಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.