Shami: ಕೊನೆಗೂ ವೃತ್ತಿಪರ ಕ್ರಿಕೆಟ್ ಗೆ ಮರಳಿದ ಮೊಹಮ್ಮದ್ ಶಮಿ
Team Udayavani, Nov 12, 2024, 3:48 PM IST
ಕೋಲ್ಕತ್ತಾ: ಟೀಂ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಶಮಿ (Mohammed Shami) ಅವರು ಕೊನೆಗೂ ವೃತ್ತಿಪರ ಕ್ರಿಕೆಟ್ ಗೆ ಮರಳಿದ್ದಾರೆ. ಕಳೆದ ವರ್ಷದ ನವೆಂಬರ್ ನಲ್ಲಿ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಕೊನೆಯದಾಗಿ ಶಮಿ ಆಡಿದ್ದರು. ವಿಶ್ವಕಪ್ ವೇಳೆ ಗಾಯಗೊಂಡಿದ್ದ ಶಮಿ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಮತ್ತೆ ರಣಜಿ ಟ್ರೋಫಿ ಮೂಲಕ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ.
ಬುಧವಾರ (ನ.13) ದಂದು ಇಂದೋರ್ ನಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿರುದ್ದದ ರಣಜಿ ಪಂದ್ಯದಲ್ಲಿ ಪಶ್ವಿಮ ಬಂಗಾಳ ತಂಡವನ್ನು ಶಮಿ ಪ್ರತಿನಿಧಿಸಲಿದ್ದಾರೆ. ಪಶ್ವಿಮ ಬಂಗಾಳ ಕ್ರಿಕೆಟ್ ಮಂಡಳಿ ಈ ವಿಚಾರವನ್ನು ಖಚಿತಪಡಿಸಿದೆ.
2023ರ ನವೆಂಬರ್ 19ರಂದು ಆಸ್ಟ್ರೇಲಿಯಾ ವಿರುದ್ದದ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ಶಮಿ ಕೊನೆಯದಾಗಿ ಆಡಿದ್ದರು. ಆ ವಿಶ್ವಕಪ್ ನಲ್ಲಿ ಶಮಿ ಅತ್ಯುತ್ತಮ ಫಾರ್ಮ್ ನಲ್ಲಿದ್ದರು. ಅಕಿಲ್ಸ್ ಹೀಲ್ ಗಾಯಕ್ಕೆ ಒಳಗಾಗಿದ್ದ ಶಮಿ ಆರಂಭದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಆದರೆ ನಂತರ ಅವರ ಮೊಣಕಾಲು ಊತಗೊಂಡ ಕಾರಣ ಚೇತರಿಕೆಯಲ್ಲಿ ಹಿನ್ನಡೆ ಅನುಭವಿಸಿದರು. ನ್ಯೂಜಿಲ್ಯಾಂಡ್ ವಿರುದ್ಧದ ಭಾರತದ ಟೆಸ್ಟ್ ಪಂದ್ಯದ ಸಮಯದಲ್ಲಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅವರು ಕೆಲವು ಸೆಷನ್ ಗಳನ್ನು ಹೊಂದಿದರೂ ಅವರ ಕಮ್ ಬ್ಯಾಕ್ ವಿಳಂಬವಾಯಿತು.
ಇದೀಗ ಅವರು ವೃತ್ತಿಪರ ಕ್ರಿಕೆಟ್ ಗೆ ಮರಳಿದ್ದು, ಟೀಂ ಇಂಡಿಯಾಗೆ ದೊಡ್ಡ ಬೂಸ್ಟ್ ನೀಡಿದೆ. ಭಾರತ ಇನ್ನು ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾ ವಿರುದ್ದ ಬಾರ್ಡರ್-ಗಾವಸ್ಕರ್ ಟ್ರೋಫಿ ಸರಣಿ ಆಡಲಿದೆ. ಒಂದು ವೇಳೆ ರಣಜಿಯಲ್ಲಿ ಶಮಿ ಉತ್ತಮ ಪ್ರದರ್ಶನ ನೀಡಿದರೆ, ಅವರು ಆಸೀಸ್ ಸರಣಿಯ ಭಾಗವಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.