IPL 2024; ಪಂಜಾಬ್ ತಂಡಕ್ಕೆ ಶಾಕ್; ಹತ್ತು ದಿನಗಳ ಕಾಲ ಲಭ್ಯವಿಲ್ಲ ನಾಯಕ ಶಿಖರ್ ಧವನ್
Team Udayavani, Apr 14, 2024, 2:22 PM IST
ಮೊಹಾಲಿ: ಸತತ ಪಂದ್ಯಗಳನ್ನು ಸೋತಿರುವ ಪಂಜಾಬ್ ಕಿಂಗ್ಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ನಾಯಕ ಶಿಖರ್ ಧವನ್ ಅವರು ಮುಂದಿನ ಕೆಲವು ದಿನಗಳ ಕಾಲ ಆಡುವುದಿಲ್ಲ ಎಂದು ವರದಿಯಾಗಿದೆ.
ಭುಜದ ನೋವಿನಿಂದ ಬಳಲುತ್ತಿರುವ ಎಡಗೈ ಬ್ಯಾಟರ್ ಧವನ್ ಅವರು ಶನಿವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಈ ಪಂದ್ಯದಲ್ಲಿ ಧವನ್ ಬದಲಿಗೆ ಸ್ಯಾಮ್ ಕರ್ರನ್ ಅವರು ನಾಯಕತ್ವ ವಹಿಸಿದ್ದರು.
ತಂಡದ ನಿರ್ದೇಶಕ ಸಂಜಯ್ ಬಂಗಾರ್ ಅವರು ಈ ಬಗ್ಗೆ ಮಾತನಾಡಿದ್ದು, “ಧವನ್ ಅವರು ಭುಜದ ಗಾಯದಿಂದ ಬಳಲುತ್ತಿದ್ದಾರೆ, ಆದ್ದರಿಂದ ಅವರು ಕನಿಷ್ಠ ಒಂದೆರಡು ದಿನಗಳ ಕಾಲ ಹೊರಗುಳಿಯುವ ಸಾಧ್ಯತೆಯಿದೆ ಎಂದು ನಾನು ಹೇಳುತ್ತೇನೆ. ಅನುಭವಿ ಆರಂಭಿಕ ಶಿಖರ್ ನಂತಹವರು, ಅಂತಹ ವಿಕೆಟ್‌ಗಳಲ್ಲಿ ಆಡಿದ ಅನುಭವ ಹೊಂದಿರುವವರು ತಂಡಕ್ಕೆ ಅತ್ಯಂತ ನಿರ್ಣಾಯಕರಾಗುತ್ತಾರೆ” ಎಂದಿದ್ದಾರೆ.
“ಅವರು ಚಿಕಿತ್ಸೆಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ. ಈ ಸಮಯದಲ್ಲಿ, ಅವರು ಕನಿಷ್ಠ ಏಳು-ಹತ್ತು ದಿನಗಳ ಕಾಲ ಆಟದಿಂದ ಹೊರಗುಳಿಯಬಹುದು ಎಂದು ತೋರುತ್ತದೆ” ಎಂದು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಬಂಗಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.