ಮೊದಲ ಟೆಸ್ಟ್ ಪಂದ್ಯದಿಂದಹೊರಬಿದ್ದ ಶಿಖರ್ ಧವನ್
Team Udayavani, Dec 31, 2017, 6:15 AM IST
ಹೊಸದಿಲ್ಲಿ: ದಕ್ಷಿಣ ಆಫ್ರಿಕಾದಲ್ಲಿ ಸುದೀರ್ಘ ಕ್ರಿಕೆಟ್ ಸರಣಿ ಆಡಬೇಕಿರುವ ಭಾರತ, ಇದರ ಆರಂಭಕ್ಕೂ ಮೊದಲೇ ಆಘಾತಕ್ಕೆ ಸಿಲುಕಿದೆ. ಎಡಗೈ ಆರಂಭಕಾರ ಶಿಖರ್ ಧವನ್ ಗಾಯಾಳಾಗಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ವರ್ಷಾರಂಭದ ಈ ಟೆಸ್ಟ್ ಜ. 5ರಿಂದ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಅಂಗಳದಲ್ಲಿ ಆರಂಭವಾಗಲಿದೆ.
ಶಿಖರ್ ಧವನ್ ಕಳೆದ ಮಂಗಳವಾರ ಮುಂಬಯಿಯಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮ ಜೋಡಿಯ ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದರು. ಅದೇ ದಿನ ಪಾದದ ನೋವಿಗೆ ಸಿಲುಕಿದರು. ಈಗ ನೋವು ತೀವ್ರಗೊಂಡಿದೆ. ಎಂಆರ್‌ಐ ಸ್ಕ್ಯಾನಿಂಗ್ ವರದಿ ಲಭಿಸಿದ್ದು, ಧವನ್ ಅವರಿಗೆ ಜ. 10ರ ತನಕ ವಿಶ್ರಾಂತಿ ಸೂಚಿಸಲಾಗಿದೆ. ಜ. 13ರಿಂದ ಆರಂಭವಾಗಲಿರುವ ಸೆಂಚುರಿಯನ್ ಟೆಸ್ಟ್ ಪಂದ್ಯಕ್ಕೆ ಧವನ್ ಲಭ್ಯರಾಗುವ ನಿರೀಕ್ಷೆ ಇದೆ.
ಈ ಸರಣಿಯಲ್ಲಿ ಶಿಖರ್ ಧವನ್ ಮತ್ತು ಮುರಳಿ ವಿಜಯ್ ಭಾರತದ ಮೊದಲ ಆಯ್ಕೆಯ ಆರಂಭಿಕರಾಗಿದ್ದರು. ಈಗ ಧವನ್ ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ ಇನ್ನಿಂಗ್ಸ್ ಆರಂಭಿಸಲು ಇಳಿಯಬೇಕಿದೆ.
ವಿರಾಟ್ ಕೊಹ್ಲಿ ಅಸಮಾಧಾನ
ಶಿಖರ್ ಧವನ್ ಗಾಯಾಳಾಗಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿರುವುದಕ್ಕೆ ನಾಯಕ ವಿರಾಟ್ ಕೊಹ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅತ್ಯಂತ ಮಹತ್ವದ ಹಾಗೂ ಕಠಿನ ಸರಣಿ ಎದುರಿದ್ದಾಗ ಧವನ್ ಎಚ್ಚರಿಕೆ ವಹಿಸಬೇಕಿತ್ತು ಎಂದಿದ್ದಾರೆ.
ಬೋಲ್ಯಾಂಡ್ ಪಾರ್ಕ್‌ನಲ್ಲಿ ಅಭ್ಯಾಸ
ಟೆಸ್ಟ್ ಸರಣಿಗೂ ಮುನ್ನ ಆಡಬೇಕಿದ್ದ 2 ದಿನಗಳ ಅಭ್ಯಾಸ ಪಂದ್ಯವನ್ನು ಭಾರತ ರದ್ದುಗೊಳಿಸಿದ ಕಾರಣ ನೇರವಾಗಿ ನೆಟ್ ಪ್ರ್ಯಾಕ್ಟೀಸ್‌ಗೆ ಇಳಿಯಲಿದೆ. ಇದಕ್ಕಾಗಿ ಪಾರ್ಲ್ನ “ಬೋಲ್ಯಾಂಡ್ ಪಾರ್ಕ್’ ಅಂಗಳವನ್ನು ಒದಗಿಸಲಾಗಿದೆ.
ಅಭ್ಯಾಸಕ್ಕಾಗಿ ಪಾರ್ಲ್ನ “ಸೆಂಟರ್ ಪಿಚ್’ ಅನ್ನೇ ಒದಗಿಸಬೇಕೆಂದು ತಂಡದ ಆಡಳಿತ ಮಂಡಳಿ ಬಿಸಿಸಿಐಗೆ ಮನವಿ ಮಾಡಿತ್ತು. ಭಾರತೀಯ ಕ್ರಿಕೆಟ್ ಮಂಡಳಿಯ ಕೋರಿಕೆಗೆ “ಕ್ರಿಕೆಟ್ ಸೌತ್ ಆಫ್ರಿಕಾ’ (ಸಿಎಸ್‌ಎ) ಅನುಮತಿ ನೀಡಿರಲಿಲ್ಲ. ಈಗ ಇದಕ್ಕೆ ಸಮ್ಮತಿಸಿದೆ. ಟೀಮ್ ಇಂಡಿಯಾ ಕ್ರಿಕೆಟಿಗರು ಸದ್ಯದಲ್ಲೇ ಇಲ್ಲಿ ಅಭ್ಯಾಸ ಆರಂಭಿಸಲಿದ್ದಾರೆ.
ಭಾರತ 2013-14ರ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆಯೂ ಇಂಥದೇ ಮನವಿ ಮಾಡಿತ್ತು. ಆದರೆ ಇದಕ್ಕೆ ಅಂದು ಸಿಎಸ್‌ಎ ಅನುಮತಿ ಕೊಟ್ಟಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.