ಮುರಳಿ ವಿಜಯ್ ಗಾಯಾಳು ಲಂಕಾ ಸರಣಿಗೆ ಶಿಖರ್ ಧವನ್
Team Udayavani, Jul 18, 2017, 9:03 AM IST
ಹೊಸದಿಲ್ಲಿ: ಸದ್ಯದಲ್ಲೇ ಶ್ರೀಲಂಕಾದಲ್ಲಿ ಟೆಸ್ಟ್ ಸರಣಿ ಆಡಲಿರುವ ಭಾರತ ತಂಡದಲ್ಲಿ ಒಂದು ಬದಲಾವಣೆ ಸಂಭವಿಸಿದೆ. ಆರಂಭಕಾರ ಮುರಳಿ ವಿಜಯ್ ಗಾಯದಿಂದ ಪೂರ್ತಿ ಚೇತರಿಸದ ಕಾರಣ ಈ ಪ್ರವಾಸದಿಂದ ಹೊರಗುಳಿಯಲಿದ್ದಾರೆ. ಇವರ ಬದಲು ಎಡಗೈ ಓಪನರ್ ಶಿಖರ್ ಧವನ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಸೋಮವಾರ ಈ ಬದಲಾವಣೆಯನ್ನು ಪ್ರಕಟಿಸಿದರು.
ಕಳೆದ ಆಸ್ಟ್ರೇಲಿಯ ಸರಣಿಯ ವೇಳೆ ಮುರಳಿ ವಿಜಯ್ ಬಲಗೈ ಮಣಿಗಂಟಿನ ನೋವಿಗೆ ಸಿಲುಕಿದ್ದರು. ಬಳಿಕ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಆದರೆ ಅಭ್ಯಾಸದ ವೇಳೆ ಅವರ ಮಣಿಗಂಟಿನ ನೋವು ಪೂರ್ತಿ ವಾಸಿಯಾಗದಿರುವುದನ್ನು ಬಿಸಿಸಿಐ ವೈದ್ಯಕೀಯ ತಂಡ ಗಮನಿಸಿದೆ. ವಿಜಯ್ ಅವರಿಗೆ ಇನ್ನಷ್ಟು ವಿಶ್ರಾಂತಿ ಅಗತ್ಯವಿರುವುದಾಗಿ ಸೂಚಿಸಿದೆ.
ಶಿಖರ್ ಧವನ್ 23 ಟೆಸ್ಟ್‌ಗಳನ್ನಾಡಿದ್ದು, 4 ಶತಕಗಳ ಸಹಿತ 1,464 ರನ್ ಬಾರಿಸಿದ್ದಾರೆ. ಧವನ್ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಕಳೆದ ವರ್ಷ ನ್ಯೂಜಿಲ್ಯಾಂಡ್ ವಿರುದ್ಧ ಆಡಿದ್ದರು. ತಂಡದಲ್ಲಿರುವ ಉಳಿದಿಬ್ಬರು ಆರಂಭಿಕರೆಂದರೆ ಕೆ.ಎಲ್. ರಾಹುಲ್ ಮತ್ತು ಅಭಿನವ್ ಮುಕುಂದ್. ಭಾರತ-ಶ್ರೀಲಂಕಾ 3 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಮೊದಲ ಟೆಸ್ಟ್ ಜು. 26ರಿಂದ ಗಾಲೆಯಲ್ಲಿ ಆರಂಭವಾಗಲಿದೆ.
ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರೋಹಿತ್ ಶರ್ಮ, ಆರ್. ಅಶ್ವಿನ್, ರವೀಂದ್ರ ಜಡೇಜ, ವೃದ್ಧಿಮಾನ್ ಸಾಹಾ, ಇಶಾಂತ್ ಶರ್ಮ, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಅಭಿನವ್ ಮುಕುಂದ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.