ನ್ಯೂಜಿಲ್ಯಾಂಡ್ ವಿರುದ್ಧ ಅಬ್ಬರಿಸಿದ ಶುಭ್‌ಮನ್ ಗಿಲ್; ಏಕದಿನ ಪಂದ್ಯದಲ್ಲಿ ಅಮೋಘ ದ್ವಿಶತಕ!
ಬೌಂಡರಿ, ಸಿಕ್ಸರ್ ಗಳ ಸುರಿಮಳೆ ಗೈದ ಭರವಸೆಯ ಆರಂಭಿಕ ಆಟಗಾರ
Team Udayavani, Jan 18, 2023, 5:27 PM IST
ಹೈದರಾಬಾದ್: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ಬುಧವಾರ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಸ್ಪೋಟಕ ದ್ವಿಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 149 ಎಸೆತಗಳಲ್ಲಿ 19 ಬೌಂಡರಿ ಮತ್ತು 9 ಸಿಕ್ಸರ್ ಗಳ ಸಹಿತ ಅತ್ಯಮೋಘ ಇನ್ನಿಂಗ್ಸ್ ಕಟ್ಟಿದ ಭರವಸೆಯ ಬ್ಯಾಟ್ಸ್ ಮ್ಯಾನ್ ಗಿಲ್ ಶಿಪ್ಲಿ ಎಸೆದ ಚಂಡನ್ನು ಗ್ಲೆನ್ ಫಿಲಿಪ್ಸ್ ಕೈಗಿತ್ತು ಕೊನೆಯಲ್ಲಿ ನಿರ್ಗಮಿಸಿದರು.
ಗಿಲ್ ಅವರ ಆಕ್ರಮಣಕಾರಿ ಆಟದಿಂದ ಟೀಮ್ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಗಳಿಸಿ ಭರ್ಜರಿ ಮೊತ್ತವನ್ನು ನ್ಯೂಜಿಲ್ಯಾಂಡ್ ತಂಡದ ಮುಂದಿಟ್ಟಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ನಾಯಕ ರೋಹಿತ್ ಶರ್ಮ 34 ರನ್ ಗಳಿಸಿ ಔಟಾದರು.
ವಿರಾಟ್ ಕೊಹ್ಲಿ 8 ,ಇಶನ್ ಕಿಶನ್ 5 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 31, ಹಾರ್ದಿಕ್ ಪಾಂಡ್ಯ 28 ರನ್ ಗಳಿಸಿ ಗಿಲ್ ಅವರಿಗೆ ಕೆಲಹೊತ್ತು ಸಾಥ್ ನೀಡಿದರು. ವಾಷಿಂಗ್ಟನ್ ಸುಂದರ್ 12, ಶಾರ್ದೂಲ್ ಠಾಕೂರ್ 3 ರನ್ ಗಳಿಸಿ ಔಟಾದರು. ಕುಲದೀಪ್ ಯಾದವ್ 5, ಶಮಿ 2 ರನ್ ಗಳಿಸಿ ಅಜೇಯರಾಗಿ ಉಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.