ಸ್ವಿಸ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ : ಪಿ.ವಿ. ಸಿಂಧು ಚಾಂಪಿಯನ್
Team Udayavani, Mar 28, 2022, 7:20 AM IST
ಬಾಸೆಲ್: ಭಾರತದ ಖ್ಯಾತ ಶಟ್ಲರ್ ಪಿ.ವಿ. ಸಿಂಧು ಸ್ವಿಸ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಕೂಟದ ವನಿತಾ ಸಿಂಗಲ್ಸ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಆದರೆ ಪುರುಷರ ವಿಭಾಗದ ಫೈನಲ್ನಲ್ಲಿ ಎಚ್.ಎಸ್. ಪ್ರಣಯ್ ಕಠಿನ ಹೋರಾಟದಲ್ಲಿ ಸೋತು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಸತತ ಎರಡನೇ ಫೈನಲ್ಸ್ ನಲ್ಲಿ ಆಡಿದ ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಸಿಂಧು ಅವರು ಥಾಯ್ಲೆಂಡಿನ ಬುಸಾನನ್ ಆಂಗ್ಬಮುರುಂಗಪ್ಪನ್ ಅವರನ್ನು 21-16, 21-8 ಗೇಮ್ಗಳಿಂದ ಮಣಿಸಿದರು. ಇದು ಸಿಂಧು ಅವರ ಈ ಋತುವಿನ ಎರಡನೇ ವನಿತಾ ಸಿಂಗಲ್ಸ್ ಪ್ರಶಸ್ತಿಯಾಗಿದೆ.
ಕೇವಲ 49 ನಿಮಿಷಗಳ ಹೋರಾಟ ದಲ್ಲಿ ನಾಲ್ಕನೇ ಶ್ರೇಯಾಂಕದ ಬುಸಾನನ್ ಅವರನ್ನು ಉರುಳಿಸಿದ ಸಿಂಧು ಕೊನೆಗೂ ಇಲ್ಲಿ ಪ್ರಶಸ್ತಿ ಗೆಲುವಿನ ಸಂಭ್ರಮ ಆಚರಿಸಿದರು.
ಇದನ್ನೂ ಓದಿ:ಐಪಿಎಲ್ 2022: ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಗೆ 5 ವಿಕೆಟ್ಗಳ ಭರ್ಜರಿ ಗೆಲುವು
ಮೋದಿ ಅಭಿನಂದನೆ
ಸ್ವಿಸ್ ಓಪನ್ ಪ್ರಶಸ್ತಿ ಗೆದ್ದ ಸಿಂಧು ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಸಿಂಧು ಅವರ ಈ ಸಾಧನೆಯಿಂದ ಯುವ ಕ್ರೀಡಾಪಟು ಗಳಿಗೆ ಪ್ರೇರಣೆಯಾಗಲಿದೆ ಎಂದವರು ಹಾರೈಸಿದ್ದಾರೆ.
ಪ್ರಣಯ್ ರನ್ನರ್ ಅಪ್
ಪುರುಷರ ಫೈನಲ್ನಲ್ಲಿ ಪ್ರಣಯ್ ಗೆಲ್ಲಲು ಶಕ್ತಿಮೀರಿ ಪ್ರಯತ್ನಪಟ್ಟರೂ ಯಾವುದೇ ಪ್ರಯೋಜನವಾಗಲಿಲ್ಲ. ನಾಲ್ಕನೇ ಶ್ರೇಯಾಂಕದ ಇಂಡೋನೇಶ್ಯದ ಜೊನಾಥನ್ ಕ್ರಿಸ್ಟಿ ಅವರ ಸವಾಲಿಗೆ ದಿಟ್ಟ ಉತ್ತರ ನೀಡಲು ವಿಫಲರಾದ ಪ್ರಣಯ್ 12-21, 18-21 ಗೇಮ್ಗಳಿಂದ ಶರಣಾದರು. 48 ನಿಮಿಷಗಳ ವರೆಗೆ ಹೋರಾಡಿದ ಪ್ರಣಯ್ ಅಂತಿಮವಾಗಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಜೊನಾಥನ್ ಅವರ ನಿಖರ ಮತ್ತು ಶಕ್ತಿಶಾಲಿ ಹೊಡೆತಕ್ಕೆ ಪ್ರಣಯ್ ನಿರುತ್ತರರಾದರು. ಕಳೆದ ಐದು ವರ್ಷಗಳಲ್ಲಿ ತನ್ನ ಮೊದಲ ಫೈನಲ್ ಪಂದ್ಯದಲ್ಲಿ ಆಡಿದ ಪ್ರಣಯ್ ದ್ವಿತೀಯ ಗೇಮ್ನಲ್ಲಿ ವೀರೋಚಿತ ಹೋರಾಟ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.