ದನುಷ್ಕ ಗುಣತಿಲಕಗೆ 6 ಪಂದ್ಯಗಳ ನಿಷೇಧ
Team Udayavani, Jul 28, 2018, 6:00 AM IST
ಕೊಲಂಬೊ: ದುರ್ನಡತೆಯ ಹಿನ್ನೆಲೆಯಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಆರಂಭಕಾರ ದನುಷ್ಕ ಗುಣತಿಲಕ ಅವರಿಗೆ “ಶ್ರೀಲಂಕಾ ಕ್ರಿಕೆಟ್ ಮಂಡಳಿ’ 6 ಪಂದ್ಯಗಳ ನಿಷೇಧ ವಿಧಿಸಿದೆ. ಇದು ಮುಂದಿನ ಅಂತಾರಾಷ್ಟ್ರೀಯ ಪಂದ್ಯದಿಂದಲೇ ಜಾರಿಗೆ ಬರಲಿದೆ.
ಹೊಟೇಲಿನಲ್ಲಿ ನಾರ್ವೆ ಮಹಿಳೆಯ ಮೇಲೆ ಗುಣತಿಲಕ ಸ್ನೇಹಿತನೊಬ್ಬ ಅತ್ಯಾಚಾರವೆಸಗಿ ಬಂಧನಕ್ಕೊಳಗಾಗಿದ್ದ. ಈ ಸಂದರ್ಭದಲ್ಲಿ ಗುಣತಿಲಕ ಪೊಲೀಸ್ ವಿಚಾರಣೆಗೆ ಒಳಗಾಗಿ ಬಳಿಕ ತಪ್ಪಿತಸ್ಥನಲ್ಲ ಎಂದು ಸಾಬೀತಾಗಿತ್ತು. “ನಮ್ಮ ತನಿಖೆ ಪ್ರಕಾರ ಗುಣತಿಲಕ ಈ ಪ್ರಕರಣದಲ್ಲಿ ಯಾವುದೇ ತಪ್ಪೆಸಗಿಲ್ಲ. ಈ ಘಟನೆಯ ವೇಳೆ ಅವರು ಹೊಟೇಲ್ ಕೊಠಡಿಯಲ್ಲಿ ನಿದ್ದೆ ಮಾಡು ತ್ತಿದ್ದರು. ಆದರೆ ಅವರನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿಚಾರಣೆಗೆ ಒಳಪಡಿಸಿದರೆ ತಮ್ಮ ಅಭ್ಯಂತರವಿಲ್ಲ’ ಎಂದು ಪೊಲೀಸರು ಹೇಳಿದ್ದರು.
ಕಳೆದ 10 ತಿಂಗಳಲ್ಲಿ ಗುಣತಿಲಕ ವಿರುದ್ಧ ದಾಖಲಾದ 3ನೇ ಅಶಿಸ್ತಿನ ಪ್ರಕರಣ ಇದಾಗಿದೆ. ಇವೆಲ್ಲವನ್ನೂ ಈ ಸಂದರ್ಭದಲ್ಲಿ ಪರಿಗಣಿಸಿ ನಿಷೇಧವನ್ನು ಜಾರಿಗೊಳಿಸಲಾಗಿದೆ ಎಂದು ಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ
BBK11: ಸತ್ಯಕ್ಕೆ ಸೋಲಿಲ್ಲ.. ರಜತ್ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು
Kundapura: ಚೋರಾಡಿ; ಕರೆ ಬಂದರೆ ಬೆಟ್ಟ ಹತ್ತಬೇಕು!
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.