ರಾಜಸ್ಥಾನ್ ರಾಯಲ್ಸ್ ನಾಯಕತ್ವದಿಂದ ಸ್ಮಿತ್ ದೂರ
Team Udayavani, Jan 7, 2019, 1:10 AM IST
ಹೊಸದಿಲ್ಲಿ: ಚೆಂಡು ವಿರೂಪ ಪ್ರಕರಣದಲ್ಲಿ ಸಿಲುಕಿ ಒಂದು ವರ್ಷ ನಿಷೇಧಕ್ಕೊಗಾಗಿರುವ ಆಸ್ಟ್ರೇಲಿಯ ತಂಡದ ಮಾಜಿ ನಾಯಕ ಸ್ಟೀವನ್ ಸ್ಮಿತ್ 2019ರ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆಡಿದರೂ ನಾಯಕನಾಗಿ ಕಾಣಿಸಿಕೊಳ್ಳುವುದಿಲ್ಲ.
ಕ್ರಿಕೆಟ್ ಆಸ್ಟ್ರೇಲಿಯ ಒಂದು ವರ್ಷದ ನಿಷೇಧದೊಂದಿಗೆ 2 ವರ್ಷ ನಾಯಕತ್ವವನ್ನು ವಹಿಸಿಕೊಳ್ಳಬಾರದು ಎಂದು ಸೂಚಿಸಿದ್ದು, ಈ ನಿಯಮವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕೂಡ ಪಾಲಿಸಿತ್ತಿರುವ ಕಾರಣ ರಾಜಸ್ಥಾನ ತಂಡದ ನಾಯಕತ್ವದಿಂದ ಸ್ಮಿತ್ ಅವರನ್ನು ದೂರ ಉಳಿಸಲು ನಿರ್ಧರಿಸಲಾಗಿದೆ. ಹಾಗೆಯೇ ಏಕದಿನ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿರುವ ಕಾರಣ ಸ್ಮಿತ್ ಐಪಿಎಲ್ ಲೀಗ್‌ನ ಅಂತಿಮ ಹಂತವನ್ನು ತಪ್ಪಿಸಿಕೊಳ್ಳಲಿದ್ದಾರೆ. ಹೀಗಾಗಿ ಫ್ರಾಂಚೈಸಿ ಅಜಿಂಕ್ಯ ರಹಾನೆ ಅವರಿಗೆ ತಂಡದ ಜವಾಬ್ದಾರಿ ನೀಡಲು ನಿರ್ಧರಿಸಿದೆ.
ಈ ಜವಾಬ್ದಾರಿ ರಹಾನೆಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಗಳಿಸಲು ಬಹುದೊಡ್ಡ ಅವಕಾಶವಾಗಲಿದೆ. ಸದ್ಯ ಏಕದಿನ ಕ್ರಿಕೆಟ್ ತಂಡದಲ್ಲಿ ರಹಾನೆಗೆ ಸ್ಥಾನವಿಲ್ಲ. ಕಳೆದ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನವನ್ನು ಮುನ್ನಡೆಸಿದ ರಹಾನೆ ತಂಡವನ್ನು ನಾಕೌಟ್ ಹಂತಕ್ಕೆ ತಲುಪಿಸಿದ್ದರು. ಆದರೆ ನಾಕೌಟ್‌ನಲ್ಲಿ ಕೋಲ್ಕತಾ ನೈಟ್‌ರೈಡರ್ ವಿರುದ್ಧ ಸೋಲನುಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.