ಕೆಲವರಿಗೆ ದೇಶಕ್ಕಿಂತ ಐಪಿಎಲ್ ಆಟವೇ ಮುಖ್ಯ: ವಿಶ್ವಕಪ್ ಸೋಲಿಗೆ ಕಾರಣ ಬಿಚ್ಚಿಟ್ಟ ಕಪಿಲ್ ದೇವ್
Team Udayavani, Nov 8, 2021, 12:24 PM IST
ಮುಂಬೈ: ಐಸಿಸಿ ಟಿ20 ವಿಶ್ವಕಪ್ 2021ರಲ್ಲಿ ಭಾರತದ ಅಭಿಯಾನ ಅಂತ್ಯವಾಗಿದೆ. ಇಂದು ನಮೀಬಿಯಾ ವಿರುದ್ಧ ಪಂದ್ಯವಿದ್ದರೂ ಅದು ಔಪಚಾರಿಕವಷ್ಟೇ. ಕೂಟದ ಮೊದಲೆರಡು ಪಂದ್ಯಗಳಲ್ಲೇ ಸೋಲುಂಡ ಭಾರತ ನಂತರದ ಪಂದ್ಯಗಳನ್ನು ಗೆದ್ದರೂ ಸೆಮಿ ಫೈನಲ್ ರೇಸ್ ನಿಂದ ಹೊರಬಿದ್ದಿದೆ.
ಭಾರತದ ತಂಡದ ಟಿ20 ವಿಶ್ವಕಪ್ ಸೋಲಿನ ಬಗ್ಗೆ ಮಾಜಿ ನಾಯಕ ಕಪಿಲ್ ದೇವ್ ಮಾತನಾಡಿದ್ದಾರೆ. ಕೆಲವು ಆಟಗಾರರು ರಾಷ್ಟ್ರೀಯ ತಂಡದಲ್ಲಿ ಆಡುವುದಕ್ಕಿಂತ ಇಂಡಿಯನ್ ಪ್ರೀಮಿಯರ್ ಲೀಗ್ ಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ ಎಂದು ಹೇಳಿದರು. ಅದಲ್ಲದೆ ಅವರು ಭಾರತೀಯ ಕ್ರಿಕೆಟ್‌ನ ವೇಳಾಪಟ್ಟಿಯನ್ನು ಉತ್ತಮವಾಗಿ ಯೋಜಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು (ಬಿಸಿಸಿಐ) ಒತ್ತಾಯಿಸಿದರು.
ಐಪಿಎಲ್ 2021 ರ ಎರಡನೇ ಹಂತದ ನಂತರ ಟಿ20 ವಿಶ್ವಕಪ್‌ಗೆ ತೆರಳುವ ಮೊದಲು ಭಾರತದ ಆಟಗಾರರು ವಿಶ್ರಾಂತಿ ಪಡೆಯಬೇಕಿತ್ತು ಎಂದು ಕಪಿಲ್ ದೇವ್ ಹೇಳಿದರು.
ಇದನ್ನೂ ಓದಿ:ಕ್ರಿಸ್ ಗೇಲ್ ರ ಆರು ವರ್ಷಗಳ ಹಿಂದಿನ ದಾಖಲೆ ಮುರಿದ ಮೊಹಮ್ಮದ್ ರಿಜ್ವಾನ್
“ಆಟಗಾರರು ದೇಶಕ್ಕಾಗಿ ಆಡುವುದಕ್ಕಿಂತ ಐಪಿಎಲ್‌ಗೆ ಆದ್ಯತೆ ನೀಡಿದರೆ ನಾವು ಏನು ಹೇಳಬಲ್ಲೆವು. ಆಟಗಾರರು ತಮ್ಮ ರಾಷ್ಟ್ರಕ್ಕಾಗಿ ಆಡುವುದರಲ್ಲಿ ಹೆಮ್ಮೆ ಪಡಬೇಕು. ಅವರ ಆರ್ಥಿಕ ಪರಿಸ್ಥಿತಿಗಳು ನನಗೆ ತಿಳಿದಿಲ್ಲ, ಆದ್ದರಿಂದ ಹೆಚ್ಚು ಹೇಳಲು ಸಾಧ್ಯವಿಲ್ಲ” ಎಂದು ಕಪಿಲ್ ದೇವ್ ಎಬಿಪಿ ನ್ಯೂಸ್‌ಗೆ ತಿಳಿಸಿದರು.
“ಆದರೆ ಮೊದಲ ಆದ್ಯತೆಯಾಗಿ ದೇಶದ ತಂಡ, ನಂತರ ಫ್ರಾಂಚೈಸಿಗಳು ಇರಬೇಕು ಎಂದು ನಾನು ಭಾವಿಸುತ್ತೇನೆ. ಅಲ್ಲಿ (ಐಪಿಎಲ್) ಕ್ರಿಕೆಟ್ ಆಡಬೇಡಿ ಎಂದು ನಾನು ಹೇಳುತ್ತಿಲ್ಲ, ಆದರೆ ಅದರ ಕ್ರಿಕೆಟ್ ಅನ್ನು ಉತ್ತಮವಾಗಿ ಯೋಜಿಸುವ ಜವಾಬ್ದಾರಿ ಈಗ ಬಿಸಿಸಿಐ ಮೇಲಿದೆ. ಈ ಪಂದ್ಯಾವಳಿಯಲ್ಲಿ ಮಾಡಿದ ತಪ್ಪುಗಳನ್ನು ಪುನರಾವರ್ತಿಸದಿರಲು ನಾವು ಬದ್ಧತೆ ಪ್ರದರ್ಶಿಸಬೇಕಿದೆ” ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.