ಕ್ಷಮಿಸಿ, ದೇಶಕ್ಕೆ ಪದಕ ತರಲಾಗಲಿಲ್ಲ: ಮನು
Team Udayavani, Aug 28, 2018, 6:00 AM IST
ಹೊಸದಿಲ್ಲಿ: ಕಾಮನ್ವೆಲ್ತ್ ಚಿನ್ನದ ಪದಕ ವಿಜೇತೆ 16 ವರ್ಷದ ಮನು ಭಾಕರ್ ಈ ಬಾರಿ ಏಶ್ಯನ್ ಗೇಮ್ಸ್‌ನಲ್ಲಿ ಪದಕ ವಂಚಿತ ರಾಗಿದ್ದಾರೆ. ಇವರ ಮೇಲೇರಿಸಿದ ಭರವಸೆ ಹುಸಿಯಾಗಿದೆ. ಇದಕ್ಕಾಗಿ ಅವರು ದೇಶದ ಕ್ರೀಡಾಭಿಮಾನಿಗಳಲ್ಲಿ ಕ್ಷಮೆಯಾಚಿದ್ದಾರೆ.
“ಹಿಂದಿನ ದಾಖಲೆಗಳಿಂದಾಗಿ ಎಲ್ಲರೂ ನನ್ನ ನಿರೀಕ್ಷೆ ಇಟ್ಟಿದ್ದರು. ಏಶ್ಯನ್ ಗೇಮ್ಸ್‌ನಲ್ಲಿ ನನ್ನ ಪ್ರಯತ್ನ ನಾನು ಮಾಡಿದೆ. ದೇಶಕ್ಕಾಗಿ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬುದು ನಿಜಕ್ಕೂ ಬೇಸರದ ಸಂಗತಿ. ಇದಕ್ಕಾಗಿ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ. ಆದರೆ ನನ್ನ ಪ್ರಯತ್ನ ನಿಲ್ಲಿಸುವುದಿಲ್ಲ. ನನ್ನನ್ನು ಮತ್ತೆ ಪದಕಗಳೊಂದಿಗೆ ನೀವು ನೋಡುತ್ತೀರಿ…’ ಎಂದು ಮನು ಹೇಳಿದ್ದಾರೆ.
ತಿಂಗಳ ಅಂತ್ಯದಲ್ಲಿ ಆರಂಭವಾಗುವ ವಿಶ್ವ ಚಾಂಪಿಯನ್‌ಶಿಪ್‌ಗಾಗಿ ದಕ್ಷಿಣ ಕೊರಿಯಾಗೆ ತೆರಳಲಿರುವ ಮನು ಭಾಕರ್, ಕಳೆದು ಹೋದ ಸಮಯಕ್ಕೆ ಚಿಂತಿಸುವುದಿಲ್ಲ. ವಿಶ್ವ ಚಾಂಪಿಯನ್‌ಶಿಪ್ ಮೇಲೆ ನನ್ನ ಗಮನ. ಅಲ್ಲಿ ಉತ್ತಮ ಪ್ರದರ್ಶನ ನೀಡಿ ಪದಕ ಗೆಲ್ಲುವುದು ನನ್ನ ಗುರಿ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.