ನಾಯಕತ್ವದಿಂದ ಕೊಹ್ಲಿಗೆ ಕೊಕ್: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಗಂಗೂಲಿ
Team Udayavani, Dec 10, 2021, 8:43 AM IST
ಮುಂಬೈ: ಟಿ20 ನಾಯಕತ್ವವನ್ನು ಸ್ವತಃ ತ್ಯಜಿಸಿದ ವಿರಾಟ್ ಕೊಹ್ಲಿಯನ್ನು ಏಕದಿನ ತಂಡದ ನಾಯಕತ್ವದಿಂದ ಕೆಳಕ್ಕಿಳಿಸಲಾಗಿದೆ. ಬಿಸಿಸಿಐ ನ ಏಕಾಏಕಿ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿರಾಟ್ ಪರವಾಗಿ ಹೆಚ್ಚಿನ ಫ್ಯಾನ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬುಧವಾರ ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಏಕದಿನ ನಾಯಕತ್ವ ನೀಡಿದ ನಂತರ ಭಾರತೀಯ ಕ್ರಿಕೆಟ್ ಸುತ್ತಲಿನ ವಿಭಜನೆ-ನಾಯಕತ್ವ ಚರ್ಚೆಯ ಕುರಿತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಗುರುವಾರ ಮೌನ ಮುರಿದಿದ್ದಾರೆ.
ಎರಡು ವೈಟ್-ಬಾಲ್ ಮಾದರಿಗಳಲ್ಲಿ ಇಬ್ಬರು ನಾಯಕರನ್ನು ಹೊಂದಿರುವುದು ಸೂಕ್ತವಲ್ಲ ಎಂದು ಭಾವಿಸಿದ್ದರಿಂದ ಕೊಹ್ಲಿ ಬದಲಿಗೆ ರೋಹಿತ್ ಅವರನ್ನು ಏಕದಿನ ನಾಯಕನನ್ನಾಗಿ ಮಾಡಲಾಗಿದೆ ಎಂದು ಗಂಗೂಲಿ ಹೇಳಿದ್ದಾರೆ.
ಇದನ್ನೂ ಓದಿ:ಜಾನ್ಸಿ ರಾಣಿ, ಯಾಸ್ತಿಕಾ ಅಮೋಘ ಬ್ಯಾಟಿಂಗ್‌ಇಂಡಿಯಾ “ಎ’ ತಂಡಕ್ಕೆ ಚಾಲೆಂಜರ್ ಟ್ರೋಫಿ
ಭಾರತ ಟಿ20 ತಂಡದ ನಾಯಕತ್ವವನ್ನು ತ್ಯಜಿಸದಂತೆ ವಿರಾಟ್ ಕೊಹ್ಲಿಗೆ ನಾವು ಹೇಳಿದ್ದೆವು. ಆದರೆ ಅವರು ಟಿ20 ವಿಶ್ವಕಪ್ ಬಳಿಕ ನಾಯಕತ್ವ ತ್ಯಜಿಸುವುದಾಗಿ ಅವರು ಹೇಳಿದರು. ಹೀಗಾಗಿ ಸೀಮಿತ ಓವರ್ ನ ಎರಡು ತಂಡಗಳಿಗೆ ಇಬ್ಬರು ನಾಯಕರು ಇರುವುದು ಸೂಕ್ತವಲ್ಲ ಎಂದು ಬದಲಾವಣೆ ಮಾಡಲಾಗಿದೆ ಎಂದು ಗಂಗೂಲಿ ಡ್ಯಾಮೇಜ್ ಕಂಟ್ರೋಲ್ ಗೆ ಇಳಿದಿದ್ದಾರೆ.
“ನಾವು ಏಕದಿನ ತಂಡದ ನಾಯಕನಾಗಿ ಕೊಹ್ಲಿ ಅವರ ಅತ್ಯುತ್ತಮ ದಾಖಲೆಯನ್ನು ಪರಿಗಣಿಸಿದ್ದೇವೆ. ಆದರೆ ರೋಹಿತ್ ಅವರು ಭಾರತಕ್ಕೆ ನಾಯಕತ್ವ ವಹಿಸಿರುವ ಯಾವುದೇ ಏಕದಿನಗಳಲ್ಲಿ ಅವರ ದಾಖಲೆಯನ್ನು ನೋಡಿದರೆ, ಅದು ತುಂಬಾ ಒಳ್ಳೆಯಯದಿದೆ. ಎಲ್ಲದಕ್ಕೂ ಮುಖ್ಯವಾಗಿ ಇಬ್ಬರು ವೈಟ್-ಬಾಲ್ ನಾಯಕರು ಇರಲು ಸಾಧ್ಯವಿಲ್ಲ” ಎಂದು ಭಾರತೀಯ ಎಂದು ಕ್ರಿಕೆಟ್ ಮಂಡಳಿ ಅಧ್ಯಕ್ಷ ಗಂಗೂಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.