ಆಸ್ಟ್ರೇಲಿಯಕ್ಕೆ ಬೃಹತ್‌ ಸೋಲು; ದ.ಆಫ್ರಿಕಾಕ್ಕೆ  322 ರನ್‌ ಗೆಲುವು 


Team Udayavani, Mar 26, 2018, 6:25 AM IST

AP3_2.jpg

ಕೇಪ್‌ಟೌನ್‌: ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸಿಲುಕಿ ಒದ್ದಾಡಿದ ಆಸ್ಟ್ರೇಲಿಯ ತಂಡ ಸದ್ಯ ಸಾಗುತ್ತಿರುವ ದಕ್ಷಿಣ ಆಫ್ರಿಕಾದೆದುರಿನ ಮೂರನೇ ಟೆಸ್ಟ್‌ ಪಂದ್ಯದಲ್ಲಿ 322 ರನ್ನುಗಳ ಬೃಹತ್‌ ಅಂತರದಿಂಧ ಸೋತು ಇನ್ನಷ್ಟು ಆಘಾತಕ್ಕೆ ಒಳಗಾಗಿದೆ.

ಗೆಲ್ಲಲು 430 ರನ್‌ ಗಳಿಸುವ ಗುರಿ ಪಡೆದ ಆಸ್ಟ್ರೇಲಿಯ ತಂಡವು ಮಾರ್ನೆ ಮಾರ್ಕೆಲ್‌ ದಾಳಿಗೆ ತತ್ತರಿಸಿತು. ಪಂದ್ಯದ ನಾಲ್ಕನೇ ದಿನವೇ ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ 107 ರನ್ನಿಗೆ ಆಲೌಟಾಗಿ ಸೋಲನ್ನು ಒಪ್ಪಿಕೊಂಡಿತು. ಈ ಮೊದಲು 5 ವಿಕೆಟಿಗೆ 238 ರನ್ನುಗಳಿಂದ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾವು ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ 373 ರನ್‌ ಗಳಿಸಿ ಆಲೌಟಾಯಿತು. ಮಾರ್ಕ್‌ರಮ್‌ 84, ಡಿ’ವಿಲಿಯರ್ 63, ಕಾಕ್‌ 65 ಮತ್ತು ವರ್ನನ್‌ ಫಿಲಾಂಡರ್‌ 52 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಗೆಲ್ಲಲು ಕಠಿನ ಗುರಿ ಪಡೆದ ಆಸ್ಟ್ರೇಲಿಯ ತಂಡ ಉತ್ತಮ ಆರಂಭ ಪಡೆದಿತ್ತು. ವಿಕೆಟ್‌ ನಷ್ಟವಿಲ್ಲದೇ 57 ರನ್‌ ತಲುಪಿತ್ತು. ಆದರೆ ಆಬಳಿಕ ಪಂದ್ಯದ ಚಿತ್ರಣವೇ ಬದಲಾಯಿತು. ಮುಂದಿನ ಎರಡು ರನ್‌ ಗಳಿಸುವಷ್ಟರಲ್ಲಿ 4 ವಿಕೆಟ್‌ ಕಳೆದುಕೊಂಡು ಸೋಲಿಗೆ ಸುಳಿಗೆ ಬಿತ್ತು. ಮತ್ತೆ ಸ್ವಲ್ಪ ಹೊತ್ತಿನಲ್ಲಿ  ಚೆಂಡು ವಿರೂಪದ ರೂವಾರಿ ಸ್ಟೀವನ್‌ ಸ್ಮಿತ್‌ ಕೂಡ ಔಟಾದರು. ಅಂತಿಮವಾಗಿ 107 ರನ್ನಿಗೆ ತಂಡ ಆಲೌಟಾಯಿತು.
 
ಮಾರಕ ದಾಳಿ ಸಂಘಟಿಸಿದ ಮಾರ್ನೆ ಮಾರ್ಕೆಲ್‌ ತನ್ನ 9.4 ಓವರ್‌ಗಳ ದಾಳಿಯಲ್ಲಿ ಕೇವಲ 23 ರನ್‌ ನೀಡಿ 5 ವಿಕೆಟ್‌ ಉರುಳಿಸಿದರು. 

ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸ್ಟೀವನ್‌ ಸ್ಮಿತ್‌ಗೆ ಐಸಿಸಿ ಒಂದು ಪಂದ್ಯ ನಿಷೇಧ ಹೇರಿದೆ. ಹೀಗಾಗಿ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಆಡುವುದಿಲ್ಲ. ಈ ಟೆಸ್ಟ್‌ ಜೊಹಾನ್ಸ್‌ಬರ್ಗ್‌ ನಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ. ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಆಸ್ಟ್ರೇಲಿಯದ ಪ್ರಧಾನಮಂತ್ರಿ ಸಹಿತ ಕ್ರಿಕೆಟ್‌ ವಿಶ್ವ ಟೀಕಿಸಿದೆ.

ಇದೊಂದು ಕಠಿನ 24 ತಾಸು. ತಾಯ್ನಾಡಿನ ನನ್ನ ಅಭಿಮಾನಿಗಳಲ್ಲಿ ನಾನು ಕ್ಷಮೆಯಾಚಿಸಲು ಬಯಸುತ್ತೇನೆ ಎಂದು ಪ್ರಭಾರ ನಾಯಕ ಟಿಮ್‌ ಪೈನ್‌ ಹೇಳಿದ್ದಾರೆ.

ಸಂಕ್ಷಿಪ್ತ ಸ್ಕೋರು 
ದಕ್ಷಿಣ ಆಫ್ರಿಕಾ 311 ಮತ್ತು 373 (ಮಾರ್ಕ್‌ರಮ್‌ 84, ಡಿ’ವಿಲಿಯರ್ 63, ಕಾಕ್‌ 65, ಫಿಲಾಂಡರ್‌ 52 ಔಟಾಗದೆ, ಹ್ಯಾಝೆಲ್‌ವುಡ್‌ 69ಕ್ಕೆ 3, ಕಮಿನ್ಸ್‌ 67ಕ್ಕೆ 3, ನಥನ್‌ ಲಿಯೋನ್‌ 102ಕ್ಕೆ 3); ಆಸ್ಟ್ರೇಲಿಯ 255 ಮತ್ತು 107 (ಬ್ಯಾನ್‌ಕ್ರಾಫ್ಟ್ 26, ವಾರ್ನರ್‌ 32, ಶಾನ್‌ ಮಾರ್ಷ್‌ 16, ಮಾರ್ಕೆಲ್‌ 23ಕ್ಕೆ 5, ಕೇಶವ ಮಹಾರಾಜ್‌ 32ಕ್ಕೆ 2).

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.